More

    ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು

    ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಏಪ್ರಿಲ್ 22ರಂದು ಎಸ್​ಎಂ ಕೃಷ್ಣ ಅವರು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ ಆಗಿದ್ದರು. ಇದೀಗ ಇಂದು (ಏಪ್ರಿಲ್ 29) ಎಸ್​ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

    ಎಸ್​ಎಂ ಕೃಷ್ಣ ಅವರಿಗೆ 91 ವರ್ಷ ವಯಸ್ಸಾಗಿದ್ದರಿಂದ ಅವರು ಪಪೇ ಪದೇ ಅನಾರೋಗ್ಯಕ್ಕೀಡಾಗುತ್ತಿದ್ದಾರೆ.  ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆದ್ರೆ, ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಇನ್ನೂ ತಿಳಿದುಬಂದಿಲ್ಲ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts