ಮಾಜಿ ಸಿಎಂ ಎಸ್.ಎಂ.ಕೃಷ್ಣ, ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಸೇರಿ ನಾಲ್ವರಿಗೆ ಗೌರವ ಡಾಕ್ಟರೇಟ್

mysore
Published on

ಮೈಸೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಾಲ್ವರು ಮಹನೀಯರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.


ವಿವಿ ಕಾರ್ಯಸೌಧವಾದ ಕ್ರಾಫರ್ಡ್ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಮೈವಿವಿ 104ನೇ ವಾರ್ಷಿಕ ಘಟಿಕೋತ್ಸವದಲ್ಲಿ ಎಸ್.ಎಂ.ಕೃಷ್ಣ, ನಗರದ ಸುದರ್ಶನ ನರಸಿಂಹಕ್ಷೇತ್ರದ ಪೀಠಾಧಿಪತಿ ಡಾ.ಭಾಷ್ಯಂ ಸ್ವಾಮಿ, ಬೆಂಗಳೂರಿನ ಎಂ.ಎಸ್.ರಾಮಯ್ಯ ತಾಂತ್ರಿಕ ಸಂಸ್ಥೆ ನಿರ್ದೇಶಕ, ರಾಜಕಾರಣಿ ಎಂ.ಆರ್.ಸೀತಾರಾಮ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಯಿತು.


103ನೇ ಘಟಿಕೋತ್ಸವದಲ್ಲಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅವರಿಗೆ ಗೌರವ ಪದವಿ ನೀಡಲು ನಿರ್ಧರಿಸಲಾಗಿತ್ತು. ಆದರೆ ಅವರು ಬಿಡುವಿಲ್ಲದ ಕಾರಣ ಅಂದು ಬರಲಾಗಲಿಲ್ಲ. ಹೀಗಾಗಿ ಈ ಘಟಿಕೋತ್ಸವದಲ್ಲಿ ಅವರನ್ನೂ ರಾಜ್ಯಪಾಲ ಥಾವರ ಚಂದ್ ಗೆಹಲೋತ್ ಅವರು ಸನ್ಮಾನಿಸಿದರು.


ಸಮ ಕುಲಾಧಿಪತಿಯೂ ಆದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಕುಲಪತಿ ಪ್ರೊ.ಎನ್.ಕೆ.ಲೋಕನಾಥ್, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮಾಜಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net