Ex MLA R Narayan : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಮಕೂರಿನ ಕಾಂಗ್ರೆಸ್ ಮಾಜಿ ಶಾಸಕ ಆರ್. ನಾರಾಯಣ್ (81) ಇಂದು ( ಡಿ.12) ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ನಾರಾಯಣ್ ಅವರನ್ನು ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ 8.30ಕ್ಕೆ ಕೊನೆಯುಸಿರೆಳೆದಿದ್ದಾರೆ. ತುಮಕೂರಿನ ರೈಲ್ವೆ ನಿಲ್ದಾಣದ ಸಿಎಸ್ಐ ಲೇಜೌಟ್ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ನಾರಾಯಣ್ ಅವರು ತುಮಕೂರಿನ ಬೆಳ್ಳಾವಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ.ಕೃಷ್ಣ ಸರ್ಕಾರದಲ್ಲಿ ಕರ್ನಾಟಕ ಹೌಸಿಂಗ್ ಬೋರ್ಡ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.
ಮಂಗಳವಾರ (ಡಿ.10) ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನರಾದರು. ಅವರ ಅಂತ್ಯಕ್ರಿಯೆ ನಿನ್ನೆ (ಡಿ.11) ಮಂಡ್ಯ ಜಿಲ್ಲೆಯ ಮದ್ದೂರಿನ ಅವರ ಹುಟ್ಟೂರಾದ ಸೋಮನಹಳ್ಳಿಯಲ್ಲಿ ನೆರವೇರಿಸಲಾಯಿತು.
ಪಾಕಿಗಳಿಗೆ ಭಾರತದ ಮೇಲೆಯೇ ಹೆಚ್ಚು ಆಸಕ್ತಿ! 2024ರಲ್ಲಿ ಗೂಗಲ್ನಲ್ಲಿ ಹೆಚ್ಚು ಹುಡುಕಿದ ವಿಷಯಗಳಿವು… Google Search
ನಾನು ಧನುಷ್ ಜತೆ…. ಸಾಕ್ಷ್ಯಚಿತ್ರ ವಿವಾದದ ಕುರಿತು ಅಚ್ಚರಿ ಹೇಳಿಕೆ ನೀಡಿದ ನಯನತಾರಾ | Nayanthara