ವೈಎಸ್​ಆರ್​ ಕಾಂಗ್ರೆಸ್​ ಸೇರಿದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು

Ambati Rayudu
Published on

ಅಮರಾವತಿ: ಭಾರತ ಕ್ರಿಕೆಟ್​ ತಂಡ ಮಾಜಿ ಆಟಗಾರ ಅಂಬಟಿ ರಾಯುಡು ಗುರುವಾರ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್​ ಮೋಹನ್​ ರೆಡ್ಡಿ ನೇತೃತ್ವದ ವೈಎಸ್​ಆರ್​ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಮುಮದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಅವರು ಗುಂಟೂರು ಕ್ಷೇತ್ರದಿಂದ ಸ್ಫರ್ಧಿಸಲಿದ್ದಾರೆ ಎಂದು ತಿಳಿದು ಬಂದಿದ್ದು, ಈಗಾಗಲೇ ಕ್ಷೇತ್ರ ಪ್ರವಾಸ ಆರಂಭಿಸಿದ್ದಾರೆ.

ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಅಂಬಟಿ ರಾಯುಡು, ಶಿಕ್ಷಣ ಕ್ಷೇತ್ರದಲ್ಲಿ ಸಿಎಂ ಜಗನ್ ತಂದ ಬದಲಾವಣೆಗಳಿಂದ ಮತ್ತು ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿ ಬಡ ಮಕ್ಕಳನ್ನು ಬೆಳೆಸಲು ಸಿಎಂ ಜಗನ್​ ಮೋಹನ್​ ರೆಡ್ಡಿ ಅವರು ಶ್ರಮಿಸುತ್ತಿದ್ದಾರೆ. ಇದರಿಂದ ಪ್ರಭಾವಿತರಾಗಿ ವೈಎಸ್​ಆರ್​ ಕಾಂಗ್ರೆಸ್​ ಸೇರ್ಪಡೆಯಾಗುತ್ತಿರುವುದಾಗಿ ಅಂಬಟಿ ರಾಯುಡು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net