More

    ಮಾಜಿ ಕ್ರಿಕೆಟಿಗ ಚೇತನ್ ಚೌಹಾನ್ ಸ್ಥಿತಿ ಗಂಭೀರ

    ನವದೆಹಲಿ: ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಹಾಗೂ ಉತ್ತರ ಪ್ರದೇಶ ಸರ್ಕಾರದ ಸಚಿವ ಚೇತನ್ ಚೌಹಾನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದೆ. ಕಳೆದ ತಿಂಗಳು ಕರೊನಾ ವೈರಸ್ ಸೋಂಕಿಗೆ ಒಳಗಾಗಿದ್ದ ಚೇತನ್ ಅವರನ್ನು ಗುರುಗ್ರಾಮದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹು ಅಂಗಾಂಗ ವೈಲ್ಯದಿಂದ ಬಳಲುತ್ತಿರುವ ಅವರು ವೆಂಟಿಲೇಟರ್ ಸಹಾಯದಲ್ಲಿದ್ದಾರೆ. 72 ವರ್ಷದ ಚೇತನ್ ಚೌಹಾನ್ ಉತ್ತರ ಪ್ರದೇಶದ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಜುಲೈ 12 ರಂದು ಲಖನೌದ ಸಂಜಯ್ ಗಾಂಧಿ ಪಿಜಿಐ ಆಸ್ಪತ್ರೆಯಲ್ಲಿ ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದರು.

    ಇದನ್ನೂ ಓದಿ: ಸಿಕ್ಕಿ ರೆಡ್ಡಿ-ಕಿರಣ್ 2ನೇ ಕೋವಿಡ್-19 ವರದಿ ನೆಗೆಟಿವ್

    ‘ಅವರ ಆರೋಗ್ಯದ ಸ್ಥಿತಿ ಸುಧಾರಿಸಿಲ್ಲ, ಜತೆಗೆ ಇನ್ನಿತರ ಆರೋಗ್ಯದ ಸಮಸ್ಯೆಯೂ ಕಾಣಿಸಿಕೊಂಡಿದೆ. ಕಿಡ್ನಿ ವೈಲ್ಯವಾಗಿದ್ದು, ವೆಂಟಿಲೇಟರ್ ಸಹಾಯ ನೀಡಲಾಗಿದೆ. ಈ ಹೋರಾಟದಲ್ಲಿ ಅವರು ಗೆದ್ದು ಬರಲಿ’ ಎಂದು ದೆಹಲಿ ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚೇತನ್ ಚೌಹಾನ್ ರಾಷ್ಟ್ರೀಯ ತಂಡದ ಪರ 40 ಟೆಸ್ಟ್ ಪಂದ್ಯಗಳನ್ನಾಡಿದ್ದು, ಬಹುತೇಕ ಪಂದ್ಯಗಳಲ್ಲಿ ದಿಗ್ಗಜ ಸುನೀಲ್ ಗಾವಸ್ಕರ್ ಜತೆ ಆರಂಭಿಕನಾಗಿ ಕಣಕ್ಕಿಳಿದಿದ್ದರು. ಜತೆಗೆ ದೆಹಲಿ ತಂಡದ ನಾಯಕನಾಗಿ ಕಾರ್ಯನಿರ್ವಸಿದರೆ, ಡಿಡಿಸಿಎ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ, ಮುಖ್ಯ ಆಯ್ಕೆಗಾರನಾಗಿ ಕಾರ್ಯನಿರ್ವಹಿಸಿದ್ದಾರೆ. ಭಾರತ ತಂಡ, ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದ ವೇಳೆ ಒಮ್ಮೆ ತಂಡದ ಮ್ಯಾನೇಜರ್ ಆಗಿದ್ದರು.

    ಭಾರತೀಯ ಈಜುಪಟುಗಳಿಗೆ ದುಬೈನಲ್ಲಿ 2 ತಿಂಗಳು ತರಬೇತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts