
ಅಹಮದಾಬಾದ್: ಗುಜರಾತಿನ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕೇಶುಭಾಯ್ ಪಟೇಲ್ (92) ಅವರು ಗುರುವಾರ ಕೊನೆಯುಸಿರೆಳೆದಿದ್ದಾರೆ. ಕೇಶುಭಾಯ್ ಪಟೇಲರು ಎರಡು ಅವಧಿಯಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.
ಉಸಿರಾಡಲು ತೊಂದರೆಯಾಗುತ್ತಿದೆ ಎಂದು ಗುರುವಾರ ಬೆಳಗ್ಗೆಯಷ್ಟೇ ಮನೆಯವರ ಬಳಿ ಹೇಳಿಕೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಶಿರಾದಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯವೇ ಒಳ ಒಪ್ಪಂದ ಆಗಿರಬಹುದು ಎಂದ್ರು ಎಚ್.ಡಿ.ರೇವಣ್ಣ
ಕೇಶುಭಾಯ್ ಪಟೇಲ್ ಅವರಿಗೆ ಕಳೆದ ಸೆಪ್ಟೆಂಬರ್ನಲ್ಲಿ ಕರೊನಾ ಪಾಸಿಟಿವ್ ಆಗಿತ್ತು. ಆದರೆ, ಯಾವುದೇ ರೋಗ ಲಕ್ಷಣಗಳು ಇರಲಿಲ್ಲ. ಆದರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚೇತರಿಸಿಕೊಂಡಿದ್ದ ಅವರು ಇಂದು ಬೆಳಗ್ಗೆ ಅಹಮದಾಬಾದ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. (ಏಜೆನ್ಸೀಸ್)
ಗಂಡ ವಿಚಾರಣೆಗೆ ಬರದೇ ಡಿವೋರ್ಸ್ ಅರ್ಜಿ ವಜಾ ಆದ್ರೆ ಮತ್ತೆ ಹಾಕ್ಬೋದಾ?