21.7 C
Bengaluru
Tuesday, January 21, 2020

ಬಾಟಲ್​ ಕ್ಯಾಪ್​ ಚಾಲೆಂಜ್​ಗೆ ಹೊಸ ರೂಪ ನೀಡಿದ ಯುವರಾಜ್​ ಸಿಂಗ್​: ಬ್ರಿಯಾನ್​ ಲಾರಾ ಸೇರಿ ನಾಲ್ವರಿಗೆ ಸವಾಲು

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಮುಂಬೈ: ಸದ್ಯ ಸಾಮಾಜಿಕ ಜಾಲತಾಣದಲ್ಲಿ ಬಾಟಲ್​ ಕ್ಯಾಪ್​ ಚಾಲೆಂಜ್​ ಸಿಕ್ಕಾಪಟ್ಟೆ ಟ್ರೆಂಡ್​ನಲ್ಲಿದೆ. ಹಾಲಿವುಡ್​ನಲ್ಲಿ ಶುರುವಾದ ಈ ಚಾಲೆಂಜ್​ ಅನ್ನು ಬಾಲಿವುಡ್​, ಸ್ಯಾಂಡಲ್​ವುಡ್​ ನಟರು ಸೇರಿ ಹಲವು ಸೆಲೆಬ್ರಿಟಿಗಳು ಯಶಸ್ವಿಯಾಗಿ ಪೂರೈಸಿ ತಮ್ಮ ವಿಡಿಯೋವನ್ನು ಶೇರ್​ ಮಾಡಿಕೊಂಡಿದ್ದಾರೆ.

ಅದು ಸರಿ, ಈಗ ಭಾರತ ಕ್ರಿಕೆಟ್​ ತಂಡದ ಮಾಜಿ ಆಲ್​ರೌಂಡರ್​ ಯುವರಾಜ್​ ಸಿಂಗ್​ ಇದೇ ಚಾಲೆಂಜ್​ ಅನ್ನು ಸ್ವಲ್ಪ ವಿಭಿನ್ನವಾಗಿ ಮಾರ್ಪಾಡು ಮಾಡಿ ನಾಲ್ವರು ಕ್ರಿಕೆಟಿಗರಿಗೆ ಸವಾಲು ಹಾಕಿದ್ದಾರೆ.

ಬಾಟಲ್ ಕ್ಯಾಪ್​ ಚಾಲೆಂಜ್​ ಹೇಗಿದೆ ಎಂದರೆ, ಬಾಟಲಿಯನ್ನು ಎದುರಿನ ಟೇಬಲ್​ ಮೇಲೆ ಇಟ್ಟು ಅಥವಾ ಹ್ಯಾಂಡಲ್​ನಲ್ಲಿ ಭದ್ರಪಡಿಸಿ​ ಅದರ ಮುಚ್ಚಳವನ್ನು ಸಡಿಲವಾಗಿ ಹಾಕಿಡಬೇಕು. ಚಾಲೆಂಜ್​ ಸ್ವೀಕರಿಸಿದವರು ಒಂದೇ ಕಾಲಿನಲ್ಲಿ ಒಂದು ಸುತ್ತು ಹಾಕಿ ಮತ್ತೊಂದು ಕಾಲಿನಿಂದ ಆ ಕ್ಯಾಪ್​ನ್ನು ಕಿಕ್​ ಮಾಡಬೇಕು.

ಆದರೆ, ಯುವರಾಜ್​ ಸಿಂಗ್​ ನೀಡಿದ ಚಾಲೆಂಜ್​ ಬೇರೆ ಮಾದರಿಯಲ್ಲಿದೆ. ಯುವಿ ಬಾಟಲಿಯನ್ನು ನೆಲದ ಮೇಲೆ ಇಟ್ಟುಕೊಂಡಿದ್ದಾರೆ. ನಂತರ ಕ್ರಿಕೆಟ್​ ಬ್ಯಾಟ್​ ಹಿಡಿದಿದ್ದಾರೆ. ಎದುರಿನಿಂದ ಕೆಂಪು ಬಣ್ಣದ ಟೆನ್ನಿಸ್​ ಬಾಲ್​ ಅನ್ನು ಬೌಲಿಂಗ್​ ಮಾಡಿದ್ದಾರೆ. ನಂತರ ಯುವರಾಜ್​ ಆ ಬಾಲ್​ನ್ನು ಬಾಟಲ್​ ಕಡೆಗೆ ಹೊಡೆದಿದ್ದಾರೆ. ಬಾಲ್​ ನೇರವಾಗಿ ಹೋಗಿ ಬಾಟಲಿಯ ಮುಚ್ಚಳ ತೆಗೆದು ಅದರಲ್ಲಿದ್ದ ನೀರು ಹೊರಚೆಲ್ಲಿದೆ. ಬಾಟಲಿಯೂ ಕೂಡ ಕೆಳಗೆ ಬಿದ್ದಿದೆ.
ವಿಡಿಯೋವನ್ನು ತಮ್ಮ ಇನ್​ಸ್ಟಾಗ್ರಾಂನಲ್ಲಿ ಶೇರ್​ ಮಾಡಿದ ಯುವರಾಜ್​ ಸಿಂಗ್​, ವೆಸ್ಟ್​ಇಂಡೀಸ್​ನ ಕ್ರಿಕೆಟಿಗರಾದ ಬ್ರಿಯಾನ್​ ಲಾರಾ, ಕ್ರಿಸ್​ ಗೇಲ್​ ಹಾಗೂ ಭಾರತದ ಶಿಖರ್​ ಧವನ್​, ಸಚಿನ್​ ತೆಂಡೂಲ್ಕರ್​ ಅವರನ್ನು ಟ್ಯಾಗ್​ ಮಾಡುವ ಮೂಲಕ ಅವರೆಲ್ಲರಿಗೆ ಈ ಚಾಲೆಂಜ್​ ನೀಡಿದ್ದಾರೆ.

ಇದು ನನ್ನ ಆವೃತ್ತಿಯ ಬಾಟಲ್​ ಕ್ಯಾಪ್​ ಚಾಲೆಂಜ್​. ಈ ಮೂಲಕ ಲಾರಾ, ಧವನ್​, ಸಚಿನ್​ ಮತ್ತು ಗೇಲ್​ಗೆ ಸವಾಲು ನೀಡುತ್ತಿದ್ದೇನೆ ಎಂದು ಕ್ಯಾಪ್ಷನ್​ ಬರೆದಿದ್ದಾರೆ.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...