20.4 C
Bengaluru
Sunday, January 19, 2020

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ವಿಶ್ವಶಕ್ತಿ: ಇಸ್ರೋ ಮಾಜಿ ಅಧ್ಯಕ್ಷ, ಡಾ.ಜಿ.ಮಾಧವನ್ ನಾಯರ್

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ಮಂಗಳೂರು: ನಮ್ಮ ವಿಜ್ಞಾನಿಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ಇಂದು ಸಾಕಷ್ಟು ಸಂಶೋಧನೆ ನಡೆಸುತ್ತಿದ್ದು, ಭಾರತ ವಿಶ್ವಶಕ್ತಿಯಾಗಿ ಹೊರಹೊಮ್ಮುತ್ತಿದೆ. ಚಂದ್ರಯಾನ-2 ಹೊಸ ಹುರುಪು ನೀಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ ಮಾಜಿ ಅಧ್ಯಕ್ಷ ಡಾ.ಜಿ.ಮಾಧವನ್ ನಾಯರ್ ಅಭಿಪ್ರಾಯಪಟ್ಟರು.

ಎ.ಜೆ ಸಮೂಹ ಶಿಕ್ಷಣ ಸಂಸ್ಥೆಗಳ ಅಂಗ ಸಂಸ್ಥೆ ಲಕ್ಷ್ಮೀ ಮೆಮೋರಿಯಲ್ ಫಿಸಿಯೋಥೆರಪಿ ಕಾಲೇಜು ವತಿಯಿಂದ ಶುಕ್ರವಾರ ಆರಂಭಗೊಂಡ ಎರಡು ದಿನಗಳ ರಾಷ್ಟ್ರಮಟ್ಟದ ಫಿಸಿಯೋಥೆರಪಿ ಸಮ್ಮೇಳನ ‘ಕಾನ್‌ಫ್ಲುೃಯೆನ್ಸ್ -2019’ನಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.

ಮಾನವ ಕುಲದ ಅಭಿವೃದ್ಧಿಗೆ ಬಾಹ್ಯಾಕಾಶ ಸಂಶೋಧನೆ ಸಹಕಾರಿ. ಸಾಮಾನ್ಯ ಜನರಿಗೂ ಇಂದು ಇದರ ಲಾಭ ತಲುಪಿದೆ. ಅಮೆರಿಕ, ರಷ್ಯಾಗಳಿಗೆ ಸರಿಸಮನಾಗಿ ಇಂದು ಭಾರತವೂ ಸಾಧನೆ ಮಾಡುತ್ತಿದೆ. ಮಾನವ ಸಹಿತ ಬಾಹ್ಯಾಕಾಶಯಾನಕ್ಕೆ ಸಿದ್ಧತೆ ನಡೆಸುತ್ತಿರುವುದು ಇದಕ್ಕೊಂದು ಉದಾಹರಣೆ. ಆದರೆ ಇದರಲ್ಲಿ ಸಾಕಷ್ಟು ಸವಾಲುಗಳಿದ್ದು, ಯಶಸ್ವಿಯಾಗುವ ವಿಶ್ವಾಸವಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜಿಲ್ಲೆ ರಾಜ್ಯ ಮಾತ್ರವಲ್ಲ ದೇಶದಲ್ಲೇ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅಗ್ರಪಂಕ್ತಿಯಲ್ಲಿದೆ. ಇದಕ್ಕೆ ನಮ್ಮ ಹಿರಿಯರ ಪ್ರಯತ್ನ, ಶಿಕ್ಷಣ, ಆರೋಗ್ಯ ಸಂಸ್ಥೆಗಳ ಸ್ಥಾಪನೆ ಕಾರಣ ಎಂದರು.
ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಐಜಿಪಿ ಎಂ.ಚಂದ್ರಶೇಖರ್, ಕೊಚ್ಚಿನ್ ಲೇಕ್‌ಶೋರ್ ಆಸ್ಪತ್ರೆ ವೈದ್ಯಕೀಯ ವಿಭಾಗ ಮುಖ್ಯಸ್ಥ ಡಾ.ವಿ.ಪಿ.ಗಂಗಾಧರನ್, ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ಉಪಾಧ್ಯಕ್ಷ ಎ.ಪ್ರಶಾಂತ್ ಶೆಟ್ಟಿ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ.ಶಿವಶರಣ್ ಶೆಟ್ಟಿ, ಎ.ಜೆ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಪ್ರಶಾಂತ್ ಮಾರ್ಲ, ಕಾರ್ಯಕ್ರಮ ಸಂಘಟನಾ ಅಧ್ಯಕ್ಷ ಡಾ.ಅಭಿಲಾಶ್ ಪಿ.ವಿ, ಕಾರ್ಯದರ್ಶಿ ಡಾ.ಹರೀಶ್ ಎಸ್.ಕೃಷ್ಣ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕ ಡಾ.ಸಂಜಯ್ ಏಪೆನ್ ಸ್ಯಾಮ್ಯುವೆಲ್ ವಂದಿಸಿದರು.

ಫಿಸಿಯೋಥೆರಪಿ ವೈದ್ಯಕೀಯ ಕ್ಷೇತ್ರದ ಒಂದು ಭಾಗ. ಆದರೆ ಜನಸಾಮಾನ್ಯರಿಗೆ ಇದರ ಕುರಿತು ಹೆಚ್ಚಿನ ಅರಿವಿಲ್ಲ. ಕಡಿಮೆ ವೆಚ್ಚದಲ್ಲಿ ಉತ್ತಮ ಚಿಕಿತ್ಸೆ ಫಿಸಿಯೋಥೆರಪಿ ಮೂಲಕ ಪಡೆಯಬೇಕಾಗಿದೆ. ಫಿಸಿಯೋಥೆರಪಿ ಕ್ಷೇತ್ರದಲ್ಲಿ ಕೆಲಸ ಮಾಡುವವರು, ಚಿಕಿತ್ಸೆಯಿಂದಾಗುವ ಲಾಭಗಳ ಏನಿವೆ ಎಂಬುದನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು.
– ಡಾ.ಎ.ಜೆ.ಶೆಟ್ಟಿ, ಅಧ್ಯಕ್ಷ, ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್

ಫಿಸಿಯೋಥೆರಪಿ ಕ್ಷೇತ್ರದಲ್ಲಿ ಇಂದು ಅವಕಾಶ ಹೆಚ್ಚಿದ್ದು, ಕಲಿಯುವ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಾಗಿದೆ. ದೇಹಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳಿಗೆ ಫಿಸಿಯೋಥೆರಪಿ ಮೂಲಕ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ.
– ಡಾ.ಜಿ.ಮಾಧವನ್ ನಾಯರ್, ಇಸ್ರೋ ಮಾಜಿ ಅಧ್ಯಕ್ಷ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...