ಗುಂಡಿನ ದಾಳಿ: ಚಿಕಿತ್ಸೆ ಫಲಕಾರಿಯಾಗದೇ ಜಪಾನ್​ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನ

ಅಬೆ
Published on

ಟೋಕಿಯೋ: ಗುಂಡಿನ ದಾಳಿಗೆ ಒಳಗಾಗಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೇ ಅಬೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ.
ಗುಂಡೇಟಿನಿಂದ ತೀವ್ರ ಗಾಯಗೊಂಡು ಜೀವನ್ಮರಣದ ಹೋರಾಟ ನಡೆಸುತ್ತಿದ್ದ ಶಿಂಜೋ ಅಬೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಪಶ್ಚಿಮ ಭಾಗದ ನಗರ ನಾರಾದ ರೈಲು ನಿಲ್ದಾಣ ಸಮೀಪ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ 67 ವರ್ಷದ ಶಿಂಜೋ ಅಬೆ ಶುಕ್ರವಾರ ಬೆಳಗ್ಗೆ ಭಾಷಣ ಮಾಡುತ್ತಿದ್ದರು. ಈ ವೇಳೆ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು.

1982ರಲ್ಲಿ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ ಸೇರಿದ ಶಿಂಜೋ ಅಬೆ, ವಿದೇಶಾಂಗ ಇಲಾಖೆಯಲ್ಲೂ ಕೆಲಸ ಮಾಡಿದ್ದಾರೆ. 2006ರ ಜುಲೈನಲ್ಲಿ ಪ್ರಧಾನಿ ಹುದ್ದೆ ಅಲಂಕರಿಸಿದ್ದರು. 52ನೇ ವಯಸ್ಸಿನಲ್ಲಿ ಪ್ರಧಾನಿ ಹುದ್ದೆಗೇರಿದ ಅಬೆ, ಆ ಮೂಲಕ ಅತಿ ಕಿರಿಯ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದ್ದರು. ಪ್ರಧಾನ ಮಂತ್ರಿಯಾಗಿ ಎರಡು ಅವಧಿಯನ್ನೂ ಪೂರ್ಣಗೊಳಿಸಿ, ಅನಾರೋಗ್ಯದ ಕಾರಣಕ್ಕಾಗಿ 2020ರಲ್ಲಿ ಪ್ರದಾನಿ ಸ್ಥಾನದಿಂದ ಕೆಳಗಿಳಿದಿದ್ದರು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net