

ನವದೆಹಲಿ: ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸಂಸ್ಥಾಪಕ ಶಿಬು ಸೊರೆನ್ ಇಂದು(ಆ.04) ನಿಧನರಾಗಿದ್ದಾರೆ. ಇನ್ನೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ಭೇಟಿ ನೀಡಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ಅವರಿಗೆ ಗೌರವ ಸಲ್ಲಿಸಿದರು. ಮೂತ್ರಪಿಂಡ ಸಂಬಂಧಿತ ಸಮಸ್ಯೆಗಳಿಂದ ಒಂದು ತಿಂಗಳಿಗೂ ಹೆಚ್ಚು ಕಾಲ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಬು ಸೊರೆನ್ ಇಂದು ಬೆಳಗ್ಗೆ 8:56ಕ್ಕೆ 81 ನೇ ವಯಸ್ಸಿನಲ್ಲಿ ನಿಧನರಾದರು.
ಪ್ರಧಾನಿ ಮೋದಿ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸೊರೆನ್ ಪುತ್ರ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಸಂತಾಪ ಸೂಚಿಸಿದರು.
ಇನ್ನೂ ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಶ್ರೀ ಶಿಬು ಸೊರೆನ್ ಜಿ ಅವರಿಗೆ ಗೌರವ ಸಲ್ಲಿಸಲು ಸರ್ ಗಂಗಾ ರಾಮ್ ಆಸ್ಪತ್ರೆಗೆ ಹೋಗಿದ್ದೆ. ಅವರ ಕುಟುಂಬವನ್ನೂ ಭೇಟಿಯಾಗಿದ್ದೆ. ಹೇಮಂತ್ ಜಿ, ಕಲ್ಪನಾ ಜಿ ಮತ್ತು ಶ್ರೀ ಶಿಬು ಸೊರೆನ್ ಜಿ ಅವರ ಅಭಿಮಾನಿಗಳೊಂದಿಗೆ ನನ್ನ ಆಲೋಚನೆಗಳು ಇವೆ ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
(ಏಜೆನ್ಸಿಸ್)
ತಮ್ಮ ಬೆಂಬಲಿಗರಿಂದ 'ದಿಶೂಮ್ ಗುರು' (ಮಹಾನ್ ನಾಯಕ) ಎಂದು ಕರೆಯಲ್ಪಡುವ ಶಿಬು ಸೊರೆನ್, ಭಾರತೀಯ ರಾಜಕೀಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದು, ಮೂರು ಪ್ರತ್ಯೇಕ ಸಂದರ್ಭಗಳಲ್ಲಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಮತ್ತು ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಬುಡಕಟ್ಟು ಜನಾಂಗದ ಒಬ್ಬ ಉನ್ನತ ನಾಯಕ ಮತ್ತು ಜೆಎಂಎಂ ಸ್ಥಾಪಕ ವ್ಯಕ್ತಿಗಳಲ್ಲಿ ಒಬ್ಬರಾದ ಶಿಬು ಸೊರೆನ್ ಸುಮಾರು ನಾಲ್ಕು ದಶಕಗಳ ಕಾಲ ಪಕ್ಷವನ್ನು ಮುನ್ನಡೆಸಿದರು. 1987 ರಲ್ಲಿ ಜೆಎಂಎಂ ಆಡಳಿತವನ್ನು ವಹಿಸಿಕೊಂಡರು ಮತ್ತು 2025ರ ಏಪ್ರಿಲ್‌ವರೆಗೆ ಅದರ ಅಧ್ಯಕ್ಷರಾಗಿದ್ದರು.
(ಏಜೆನ್ಸೀಸ್)