More

    ಮತ ಚಲಾಯಿಸಿದ ಮಾಜಿ ಸಿಎಂ; ಸ್ವಂತ ಬಲದಿಂದ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿದ್ದರಾಮಯ್ಯ

    ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಮತ ಚಲಾಯಿಸಿದ್ದಾರೆ. ಸಿದ್ದರಾಮಹುಂಡಿಯಲ್ಲಿ ಮತಗಟ್ಟೆ ಸಂಖ್ಯೆ 86ರಲ್ಲಿ ಪುತ್ರ ಯತೀಂದ್ರ, ಸೊಸೆ ಸ್ಮಿತಾ ಜತೆಗೆ ತೆರಳಿ ಮತದಾನ ಮಾಡಿದ್ದಾರೆ. ಬಳಿಕ ಸಿದ್ದರಾಮನಹುಂಡಿಯಲ್ಲಿರುವ ಮನೆಯಲ್ಲಿ ಕೆಲಕಾಲ ವಿಶ್ರಾಂತಿ ಪಡೆದು, ಸಿದ್ದರಾಮೇಶ್ವರ ದೇವರ ದರ್ಶನ ಪಡೆದಿದ್ದಾರೆ.

    ಇದನ್ನೂ ಓದಿ: ಮಕ್ಕಳೊಂದಿಗೆ ತೆರಳಿ ಮತ ಚಲಾಯಿಸಿದ ಸಿಎಂ ಬೊಮ್ಮಾಯಿ

    ಈ ವೇಳೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ 130 ಸೀಟುಗಳನ್ನು ಪಡೆಯುತ್ತದೆ, ಅದು 150 ಸ್ಥಾನಗಳಿಗೆ ಏರಬಹುದು ಎಂದು ನಿರಂತರವಾಗಿ ಹೇಳುತ್ತಲೇ ಇದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

    ಇದನ್ನೂ ಓದಿ: ಕರ್ನಾಟಕ ಚುನಾವಣೆ 2023: ಉತ್ತಮ ಆರಂಭ, 9 ಗಂಟೆಯವರೆಗೆ ಶೇ. 8 ರಷ್ಟು ಮತ ಚಲಾವಣೆ

    ಮತದಾರರಿಂದ ಪೂರಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಶೇ.60ಕ್ಕೂ ಹೆಚ್ಚು ಮತಗಳನ್ನು ಪಡೆಯುತ್ತೇನೆ. ಕಾಂಗ್ರೆಸ್ ಸ್ವಂತ ಬಲದಿಂದ ಈ ಬಾರಿ ಸರ್ಕಾರ ರಚಿಸಲಿದೆ. ನಾನು ಯಾವುದೇ ಕಾರಣಕ್ಕೂ ರಾಜಕೀಯದಿಂದ ನಿವೃತ್ತಿ ಆಗುವುದಿಲ್ಲ. ಆದರೆ ಮುಂದಿನ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಇದು ನನ್ನ ಕೊನೆಯ ಚುನಾವಣೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts