

ಬೆಂಗಳೂರು: ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಸೋಮವಾರ ಸಂಜೆ ರಾಜ್ಯ ಬಿಜೆಪಿ ಘಟಕದಿಂದ ಆದೇಶ ಜಾರಿ ಮಾಡಿದ್ದು, ಪಕ್ಷದ ಆದೇಶವನ್ನು ಉಲ್ಲಂಘಿಸಿ ಶಿವಮೊಗ್ಗದಿಂದ ಸ್ಪರ್ಧೆ ಮಾಡಿದ್ದೀರಾ. ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಾ. ಇದು ಪಕ್ಷದ ಶಿಸ್ತು ಉಲ್ಲಂಘಟನೆ. ತತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ " ಎಂದು ಉಲ್ಲೇಖಿಸಲಾಗಿದೆ.
ಕೆಎಸ್ ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಹಿಂದಕ್ಕೆ ಸರಿಸುವ ನಿಟ್ಟಿನಲ್ಲಿ ಸಾಕಷ್ಟು ಸಭೆಗಳು ನಡೆದವು. ಹಿರಿಯ ಮುಖಂಡರು ಮಾತನಾಡಿದರು. ಆದರೂ, ಈಶ್ವರಪ್ಪ ಚುನಾವಣೆ ಸ್ಪರ್ಧೆ ಮಾಡುತ್ತೇನೆ ಎಂದು ಪಟ್ಟು ಹಿಡಿದಿದ್ದರು. ಕರ್ನಾಟಕದಲ್ಲಿ ನಡೆಯುವ 2 ನೇ ಹಂತದ ಚುನಾವಣೆಯ ನಾಮಪತ್ರ ಹಿಂಪಡೆಯುವ ದಿನಾಂಕ ಏಪ್ರಿಲ್ 22 ಆಗಿತ್ತು. ಆದರೆ, ಈಶ್ವರಪ್ಪ ನಾಮಪತ್ರ ಹಿಂಪಡೆಯದ ಹಿನ್ನೆಲೆ ಪಕ್ಷದಿಂದ ಹೊರ ಹಾಕಲಾಗಿದೆ.
ಬಿಜೆಪಿಯಿಂದ ಹಾಲಿ ಸಂಸದ ಬಿ.ವೈ. ರಾಘವೇಂದ್ರ, ಕಾಂಗ್ರೆಸ್ ನಿಂದ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ಸ್ಪರ್ಧಿಸಿದ್ದಾರೆ. ಇನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಸ್.ಕೆ. ಪ್ರಭು, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ ಕೆ.ಎ, ಬಹುಜನ ಸಮಾಜವಾದಿ ಪಾರ್ಟಿಯಿಂದ ಎ.ಡಿ. ಶಿವಪ್ಪ, ಯಂಗ್ಸ್ಟರ್ ಎಂಪರ್ಮೆಂಟ್ ಪಾರ್ಟಿಯಿಂದ ಯೂಸುಫ್ ಖಾನ್ ಕಣದಲ್ಲಿದ್ದಾರೆ.
https://www.vijayavani.net/sc-allows-14-year-old-pregnant-rape-survivor-to-undergo-abortion