Friday, 14th December 2018  

Vijayavani

ಚಾಮರಾಜನಗರದಲ್ಲಿ ವಿಷವಾದ ಮಾರಮ್ಮನ ಪ್ರಸಾದ- ನಾಲ್ವರ ಸಾವು-40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, ಜಿಲ್ಲಾಧಿಕಾರಿ ಭೇಟಿ        ರಾಜಸ್ಥಾನ ಸಿಎಂ ಆಗಿ ಆಶೋಕ್ ಗೆಹ್ಲೋಟ್, ಯುವ ನಾಯಕ ಸಚಿನ್ ಪೈಲಟ್​​ಗೆ ಡಿಸಿಎಂ ಪಟ್ಟ- ಕಾಂಗ್ರೆಸ್​ನಿಂದ ಅಧಿಕೃತ ಘೋಷಣೆ        ಚೆನ್ನೈನ ರೇಲಾ ಆಸ್ಪತ್ರೆಗೆ ಭೇಟಿ ನೀಡಿ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್​ವೈ- ಸಿಎಂ ಎಚ್​ಡಿಕೆ ಚೆನ್ನೈಗೆ ಪ್ರಯಾಣ        ಭದ್ರತೆಗಾಗಿ ರಫೇಲ್ ಖರೀದಿ-ಸುಪ್ರೀಂಕೋರ್ಟ್ ತೀರ್ಪಿನಿಂದ ಭ್ರಮನಿರಸನ-ರಾಗಾ ವಿರುದ್ಧ ಹಾಲಿ ಮಾಜಿ ರಕ್ಷಣಾ ಸಚಿವರ ಕಿಡಿ        ನಾಲ್ಕು ದಿನದಲ್ಲಿ ಎಲ್ಲ ಸರಿಹೋಗುತ್ತೆ-ಪ್ರಯಾಣಿಕರಿಗೆ ಯಾವುದೇ ಆತಂಕ ಬೇಡ-ಪಿಲ್ಲರ್ ಬಿರುಕಿಗೆ BMRCL ಎಂಡಿ ಸ್ಪಷ್ಟನೆ        ನನಗೂ ಸಚಿವೆಯಾಗುವ ಆಸೆ ಇದೆ- ಅಂತರಂಗ ತೆರೆದಿಟ್ಟ ಲಕ್ಷ್ಮೀ ಹೆಬ್ಬಾಳ್ಕರ್- ಕೈ ಸಚಿವಾಕಾಂಕ್ಷಿಗಳ ಪಟ್ಟಿಗೆ ಈಗ ಹೊಸ ಸೇರ್ಪಡೆ       
Breaking News

ಎಡರಂಗದ ಅಗ್ರಮಾನ್ಯ ನಾಯಕ ಸೋಮನಾಥ ಚಟರ್ಜಿ ನಿಧನ

Monday, 13.08.2018, 9:34 AM       No Comments

ಕೊಲ್ಕತ್ತಾ: ಲೋಕಸಭೆಯ ಮಾಜಿ ಸ್ಪೀಕರ್​, ಎಡರಂಗದ ಪ್ರಮುಖ ನಾಯಕ ಸೋಮನಾಥ ಚಟರ್ಜಿ ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.

ಕಿಡ್ನಿ ಸಂಬಂಧಿತ ಸಮಸ್ಯೆ ಮತ್ತು ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿ ಭಾನುವಾರ ಗಂಭೀರಗೊಂಡಿದ್ದ ಅವರನ್ನು ಕೋಲ್ಕತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ಬೆಳಗ್ಗೆ ಅವರಿಗೆ ಲಘು ಹೃದಯಾಘಾತವಾಗಿತ್ತು. ಹೀಗಾಗಿ ಅವರು ಕೊನೆಯುಸಿರೆಳೆದಿದ್ದಾರೆ.

ಸೋಮನಾಥ ಚಟರ್ಜಿ ಅವರಿಗೆ 89 ವರ್ಷಗಳಾಗಿತ್ತು. ಹತ್ತು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಸೋಮನಾಥ ಚಟರ್ಜಿ 13ನೇ ಲೋಕಸಭೆಯ (2004ರಿಂದ 2009ರ ವರೆಗೆ) ಸ್ಪೀಕರ್​ ಆಗಿ ಕಾರ್ಯನಿರ್ವಹಿಸಿದ್ದರು. ಕಳೆದ ಜುಲೈನಲ್ಲಿ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕೋಲ್ಕತಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚೇತರಿಸಿಕೊಂಡಿದ್ದರು. ಆದರೆ, ಒಂದೇ ತಿಂಗಳ ಅಂತರದಲ್ಲಿ ಮತ್ತೆ ಅನಾರೋಗ್ಯಕ್ಕೀಡಾದ ಅವರು ಸೋಮವಾರ ಅಸುನೀಗಿದ್ದಾರೆ.

ಎಡರಂಗದ ಅಗ್ರಮಾನ್ಯ ನಾಯಕರೆನಿಸಿಕೊಂಡಿದ್ದ ಸೋಮನಾಥ ಚಟರ್ಜಿ ರಾಷ್ಟ್ರದ ಹಿರಿಯ ರಾಜಕಾರಣಿ. ಹೀಗಿದ್ದ ಅವರನನ್ನು 2008ರಲ್ಲಿ ಸಿಪಿಎಂನಿಂದ ಉಚ್ಚಾಟಿಸಲಾಗಿತ್ತು. ಅಮೆರಿಕ ಜತೆಗೆ ನಡೆದಿದ್ದ ಅಣು ಒಪ್ಪಂದದ ವಿಚಾರದಲ್ಲಿ ಎಡ ಪಕ್ಷಗಳು 2008ರಲ್ಲಿ ಅಂದಿನ ಯುಪಿಎ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದವು. ಆದರೆ, ಇದನ್ನು ವಿರೋಧಿಸಿದ್ದ ಚಟರ್ಜಿ ಅವರನ್ನು ಸಿಪಿಐಎಂ ಉಚ್ಚಾಟಿಸಿತ್ತು.

Leave a Reply

Your email address will not be published. Required fields are marked *

Back To Top