More

    ಮಾಜಿ ಮೇಯರ್ ಸಂಪತ್​ ರಾಜ್​ ಬಂಧನ; ಕೊನೆಗೂ ಸಿಕ್ಕಿಬಿದ್ದ ‘ಹಳ್ಳಿ ಗಲಭೆ’ ಕಿಂಗ್​ಪಿನ್​

    ಬೆಂಗಳೂರು: ಕಾಡುಗೊಂಡನಳ್ಳಿ (ಕೆ.ಜಿ.ಹಳ್ಳಿ) ಹಾಗೂ ದೇವರಜೀವನಹಳ್ಳಿ (ಡಿ.ಜೆ.ಹಳ್ಳಿ) ಗಲಭೆ ಮತ್ತು ಶಾಸಕ ಅಖಂಡ ಶ್ರೀನಿವಾಸ್ ಮನೆ ಧ್ವಂಸ ಪ್ರಕರಣದ ಪ್ರಮುಖ ಆರೋಪಿ, ಮಾಜಿ ಮೇಯರ್ ಸಂಪತ್ ರಾಜ್​ ಕೊನೆಗೂ ಸಿಕ್ಕಿಬಿದ್ದಿದ್ದಾರೆ. ಪ್ರಕರಣದಲ್ಲಿ ಹೆಸರು ತಳುಕು ಹಾಕಿಕೊಂಡು, ಕೇಸ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಸಂಪತ್ ರಾಜ್​, ಸೋಮವಾರ ರಾತ್ರಿ ಬೆಂಗಳೂರಿಗೆ ಬಂದು ನಿರಾಳರಾಗುತ್ತಿದ್ದಂತೆ ಪೊಲೀಸರು ಬಂಧಿಸಿದ್ದಾರೆ.

    ಬಂಧನಕ್ಕೆ ಜಾಲ ಬೀಸಿದ್ದ ಸಿಸಿಬಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಎಸ್ಕೇಪ್ ಆಗುತ್ತಿದ್ದ ಸಂಪತ್ ರಾಜ್, ನಾಗರಹೊಳೆ, ಕೇರಳ ಮುಂತಾದೆಡೆಗೆ ಪ್ರಯಾಣಿಸುತ್ತಿದ್ದರು. ಆದರೆ ಸೋಮವಾರವಷ್ಟೇ ಬೆಂಗಳೂರಿಗೆ ಬಂದು ಬೆನ್ಸನ್​ ಟೌನ್​ನಲ್ಲಿನ ಅಪಾರ್ಟ್​ಮೆಂಟೊಂದರಲ್ಲಿ ಹಾಯಾಗಿದ್ದ ಸಂಪತ್​ ರಾಜ್​ ಕುರಿತು ಖಚಿತ ಮಾಹಿತಿ ಸಿಗುತ್ತಿದ್ದಂತೆ, ಎಸಿಪಿ ವೇಣುಗೋಪಾಲ್​ ನೇತೃತ್ವದಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

    ಆರೋಪಿಯನ್ನು ಬಂಧಿಸಿ ಅಜ್ಞಾತ ಸ್ಥಳದಲ್ಲಿ ಇರಿಸಿರುವ ಸಿಸಿಬಿ ಪೊಲೀಸರು, ಅವರನ್ನು ಇಂದು ಮಧ್ಯಾಹ್ನ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಪ್ರಕರಣ ಸಂಬಂಧ 50 ಪುಟಗಳ ಮಧ್ಯಂತರ ದೋಷಾರೋಪ ಪಟ್ಟಿಯನ್ನು ಸಿಸಿಬಿ ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts