

ದಾವಣಗೆರೆ: ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಅಳಿಯ ಕೆ.ಜಿ.ಪ್ರತಾಪ್ ಕುಮಾರ್ (42) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿದ್ದಾರೆ.
ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್ ಇಂದು (ಜುಲೈ 08) ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಅರಕೆರೆ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಸ್ವಸ್ಥಗೊಂಡಿದ್ದನ್ನು ಗಮನಿಸಿದ ಸ್ಥಳೀಯರು ಪ್ರತಾಪ್ ಕುಮಾರ್ ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಮೃತಪಟ್ಟಿದ್ದಾರೆ ಎಂದು ಎಂದು ಮೂಲಗಳು ಹೇಳಿವೆ.
ಕಾರಿನಲ್ಲಿ ಪ್ರತಾಪ್ ಅವರು ಒಬ್ಬರೇ ಇದ್ದರು. ವಾಹನದಲ್ಲಿ ವಿಷದ ಬಾಟಲಿ ಪತ್ತೆಯಾಗಿದೆ. ವಿಷ ಸೇವನೆಗೆ ಕಾರಣ ತಿಳಿದು ಬಂದಿಲ್ಲ. ಹೊನ್ನಾಳಿ ಪೊಲಿಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.