ರಾಜಕೀಯಕ್ಕೆ ರೀ ಎಂಟ್ರಿ: ಕೊಪ್ಪಳದಲ್ಲಿ ಮನೆ ಹುಡುಕುತ್ತಿರುವ ಗಾಲಿ ಜನಾರ್ದನ ರೆಡ್ಡಿ

ಕೊಪ್ಪಳ: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವಂತೆ ರಾಜ್ಯ ರಾಜಕಾರಣಕ್ಕೆ ರೀ ಎಂಟ್ರಿ ಕೊಡಲು ಪ್ರಯತ್ನಿಸುತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ಗಡಿ ಭಾಗದ ಹಳ್ಳಿಗಳಲ್ಲಿ ವಾಸ್ತವ್ಯ ಹೂಡಲು ಸೂಕ್ತ ಜಾಗ ಹುಡುಕುತ್ತಿದ್ದು, ಈಗ ಕೊಪ್ಪಳದಲ್ಲಿ ಮನೆಯೊಂದನ್ನು ಪರಿಶೀಲಿಸಿದ್ದಾರೆ.

ರೆಡ್ಡಿ ಈಗಾಗಲೇ ಮೂರ್ನಾಲ್ಕು ಕಡೆ ಮನೆ ನೋಡಿದ್ದಾರೆ. ಈಗ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿಯಲ್ಲಿ ಮನೆಯೊಂದನ್ನು ಪರಿಶೀಲಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲವನ್ನು ಮೂಡಿಸಿದೆ.

ಸುಪ್ರೀಂ ಕೋರ್ಟ್​ ಜನಾರ್ದನ ರೆಡ್ಡಿಗೆ ಬಳ್ಳಾರಿ, ಅನಂತಪುರ ಮತ್ತು ಕಡಪ ಜಿಲ್ಲೆಗಳಿಗೆ ಪ್ರವೇಶಿಸದಂತೆ ನಿಷೇಧಿಸಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿಗೆ ಹೊಂದಿಕೊಂಡಿರುವ ಜಿಲ್ಲೆಗಳ ಗಡಿ ಹಳ್ಳಿಗಳಲ್ಲಿ ವಾಸ್ತವ್ಯ ಹೂಡಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ರಣತಂತ್ರ ರೂಪಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *