More

    ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ

    ಹುಮನಾಬಾದ್: ಅನಿಲ ಸೋರಿಕೆಯಿಂದ ಇಬ್ಬರು ಯುವ ಕಾರ್ಮಿಕರು ಮೃತಪಟ್ಟಿರುವುದನ್ನು ಗಂಭೀರ ಪರಿಗಣಿಸಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮಾಜಿ ಸಚಿವ ರಾಜಶೇಖರ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.

    ಪಟ್ಟಣ ಹೊರವಲಯದ ಕೈಗಾರಿಕಾ ಪ್ರದೇಶದ ಕೆಮಿಕಲ್ಸ್​ ಕಾರ್ಖಾನೆಯೊಂದರಲ್ಲಿ ಗ್ಯಾಸ್ ಸೋರಿಕೆಯಿಂದ ಇಬ್ಬರು ಮೃತಪಟ್ಟಿದ್ದರಿಂದ ಗುರುವಾರ ಅಧಿಕಾರಿಗಳ ಜತೆ ಅಲ್ಲಿಗೆ ತೆರಳಿ ಮಾಹಿತಿ ಪಡೆದ ಅವರು, ಕಾರ್ಖಾನೆಯವರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಅಧಿಕಾರಿಗಳು ಎಲ್ಲ ಕಾರ್ಖಾನೆಗಳಲ್ಲಿ ಸುರಕ್ಷತೆ ಬಗ್ಗೆ ಗಮನ ಹರಿಸಬೇಕು ಎಂದರು.

    ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್​, ಭೀಮರಾವ ಪಾಟೀಲ್ ಮಾತನಾಡಿ, ಮುಂದೆ ಇಂತಹ ಘಟನೆ ಸಂಭವಿಸದಂತೆ ಎಚ್ಚರ ವಹಿಸಬೇಕು ಎಂದರು.

    ತಹಸೀಲ್ದಾರ್ ಅಂಜುಂ ತಬಸ್ಸುಮ್, ಗ್ರೇಡ್-೨ ತಹಸೀಲ್ದಾರ್ ಮಂಜುನಾಥ ಪಂಚಾಳ, ಸಿಪಿಐ ಗುರು ಪಾಟೀಲ್​, ಪಿಡಿಒ ಹಣಮಂತ ಕಡಕೋಳ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts