25.1 C
Bangalore
Friday, December 6, 2019

ಬ್ಯಾಂಕ್‌ ವಿಲೀನ ಪ್ರಕ್ರಿಯೆ ಪ್ರಧಾನಿ ಮೋದಿಯ ಆತುರದ ನಿರ್ಧಾರ ಎಂದ ಮಾಜಿ ಸಚಿವ ವೀರಪ್ಪ ಮೊಯ್ಲಿ

Latest News

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು. ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ...

ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್​ಕೌಂಟರ್​​ ಅನ್ನು ಸ್ವಾಗತಿಸಿದ ಗೋವಾ ಕಾಂಗ್ರೆಸ್​​

ಪಣಜಿ: ಹೈದರಾಬಾದ್​ನಲ್ಲಿ ಶುಕ್ರವಾರ ಮುಂಜಾನೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಕೊಲೆ ಮಾಡಿದ್ದನ್ನು ಗೋವಾ ಕಾಂಗ್ರೆಸ್​ ಮಹಿಳಾ...

ಉಡುಪಿ: ರಾಷ್ಟ್ರದಲ್ಲಿ ವಿರೋಧ ಪಕ್ಷಗಳು ವಿಫಲವಾಗಿವೆ. ವಿರೋಧ ಪಕ್ಷಗಳು ಗಟ್ಟಿಯಾಗಿಲ್ಲ ಎಂದು ಕೇಂದ್ರ ಸರ್ಕಾರ ಹೀಗೆಲ್ಲ ಮಾಡುತ್ತಿದೆ. ಆದರೆ, ದೇಶದ ಅಭಿವೃದ್ಧಿಗೆ ಈ ಧೋರಣೆ ಮಾರಕ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕೇಂದ್ರದ ವೈಫಲ್ಯ ಜನರಿಗೆ ತಲುಪಿಸಲು ಕಾಂಗ್ರೆಸ್ ಎಚ್ಚೆತ್ತುಕೊಳ್ಳಬೇಕು. ಕಾಂಗ್ರೆಸ್ ನಾಯಕರು ಮೊದಲು ಎಚ್ಚೆತ್ತುಕೊಳ್ಳಬೇಕು. ಸಕ್ರಿಯ ರಾಷ್ಟ್ರ ನಿರ್ಮಾಣಕ್ಕೆ ಕಾಂಗ್ರೆಸ್ ಮುಂದಾಗಬೇಕು. ಇದು ಕಾಂಗ್ರೆಸ್‌ನ ರಾಷ್ಟ್ರೀಯ ಕರ್ತವ್ಯವೂ ಹೌದು. ಜಾರಿ ನಿರ್ದೇಶನಾಲಯ(ಇ.ಡಿ.) ಮೂಲಕ ಹೆದರಿಸುವ ಕೆಲಸ ಆಗುತ್ತಿದೆ. ಚಿದಂಬರಂ ಅವರನ್ನು ಒಳಗೆ ಹಾಕಿದ್ದಾರೆ. ಇನ್ನು ಡಿಕೆಶಿಯನ್ನೂ ಒಳಗೆ ಹಾಕುತ್ತಾರೆ. ಆದರೆ, ಪ್ರಜಾಪ್ರಭುತ್ವ ಹಿತರಕ್ಷಣೆಗೆ ಕಾಂಗ್ರೆಸ್ ನಾಯಕರು ಹೆದರಬಾರದು ಎಂದು ಹೇಳಿದರು.

ಪ್ರವಾಹದಿಂದ ಆಗಿರುವ ನಷ್ಟ ಐವತ್ತು ಸಾವಿರ ಕೋಟಿ ಅಲ್ಲ. ರಾಜ್ಯದಲ್ಲಿ ಸುಮಾರು 5 ಲಕ್ಷ ಕೋಟಿ ನಷ್ಟವಾಗಿದೆ. ಐಎಎಸ್ ಅಧಿಕಾರಿಗಳ ನಿಯೋಗದಿಂದ ಪ್ರಯೋಜನ ಇಲ್ಲ. ತಜ್ಞರ ಸಮಿತಿ‌ ಮಾಡಬೇಕು. ಕೇಂದ್ರ ಸರ್ಕಾರ ಪ್ರವೇಶ ಆಗಬೇಕು. ಇವತ್ತಿನವರೆಗೆ ಕೇಂದ್ರ ನಯಾ ಪೈಸೆ ಬಿಡುಗಡೆ ಮಾಡಿಲ್ಲ. ಪ್ರಧಾನಿ ಅ. 7ಕ್ಕೆ ಬರುತ್ತಾರಂತೆ. ಅವರು ಬಂದು ಘೋಷಣೆ ಮಾಡಬೇಕು ಎನ್ನುವುದು ಏನಿದೆ? ಪರಿಹಾರ ಘೋಷಣೆಗೆ ಕಾಯುವುದು ಸರಿಯಲ್ಲ. ಗೃಹ ಸಚಿವರು ರಾಷ್ಟ್ರೀಯ ವಿಪತ್ತು ಸಮಿತಿ ಅಧ್ಯಕ್ಷರೂ ಆಗಿದ್ದಾರೆ. ಅಮಿತ್ ಷಾ ರಾಜ್ಯದ ಸ್ಥಿತಿ ನೋಡಿದ್ದಾರೆ. ಹಾಗಿದ್ದರೂ ಪರಿಹಾರ ಘೋಷಣೆಗೆ ವಿಳಂಬ ಯಾಕೆ? ರಾಜ್ಯದಲ್ಲಿ ಸಿಎಂ ವಿರೋಧ ಪಕ್ಷದ ನಾಯಕರನ್ನು ವಿಶ್ವಾಸ ಪಡೆದಿಲ್ಲ. ಪ್ರವಾಹದ ಕುರಿತು ಕರೆದು ಮಾತನಾಡಿಸಿಲ್ಲ, ಅಭಿಪ್ರಾಯ ಪಡೆದಿಲ್ಲ ಎಂದು ದೂರಿದರು.

ಬ್ಯಾಂಕ್ ವಿಲೀನ ಪ್ರಧಾನಿ‌ ಮೋದಿಯ ಆತುರದ ನಿರ್ಧಾರ. ರಾತ್ರಿ ನಿರ್ಧಾರ ಮಾಡುತ್ತಾರೆ. ಬೆಳಗ್ಗೆ ಘೋಷಣೆ ಮಾಡುತ್ತಾರೆ. ಕಾಶ್ಮೀರ ವಿಚಾರದಲ್ಲೂ ಪ್ರಧಾನಿ ಆತುರದ ನಿರ್ಧಾರ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬ್ಯಾಂಕ್‌ಗಳ ತೊಟ್ಟಿಲು. ಅವಿಭಜಿತ ಜಿಲ್ಲೆಗಳು ನಾಲ್ಕು ಬ್ಯಾಂಕ್‌ಗಳ ತವರು. ವಿಜಯ ಬ್ಯಾಂಕ್ ವಿಲೀನ ಆಯ್ತು. ಈಗ ಕೆನರಾ, ಸಿಂಡಿಕೇಟ್ ಕಾರ್ಪೋರೇಷನ್ ಬ್ಯಾಂಕ್ ಸರದಿ. ಬ್ಯಾಂಕ್ ವಿಲೀನದ ಸಾಧಕ ಬಾಧಕ ಚರ್ಚೆ ಮಾಡಿಲ್ಲ. ಈ ಎಲ್ಲ ಬ್ಯಾಂಕ್‌ಗಳಿಗೂ ಒಂದು ಅಸ್ಮಿತೆ ಇದೆ. ಜನರಿಂದ ಬ್ಯಾಂಕುಗಳನ್ನು ದೂರ ಕೊಂಡೊಯ್ಯಲಾಗುತ್ತಿದೆ. ವಿಲೀನ ಮಾಡುವ ಮೂಲಕ ದೊಡ್ಡ ಬ್ಯಾಂಕ್ ಮಾಡುತ್ತೇವೆ ಎನ್ನುತ್ತಾರೆ. ಈ ಬ್ಯಾಂಕುಗಳು ಇನ್ನು ಹಳ್ಳಿಗರಿಗೆ ತಲುಪಲ್ಲ. ದೊಡ್ಡ ಉದ್ಯಮಿಗಳಿಗೆ ಸಾಲ ಕೊಡಲು ದೊಡ್ಡ ಬ್ಯಾಂಕ್ ಮಾಡಿದಾರೆ ಎಂದು ಆರೋಪಿಸಿದರು.

ಮುಂದೆ ನಮ್ಮ ಬ್ಯಾಂಕುಗಳನ್ನು ಹೊರದೇಶದ ಬ್ಯಾಂಕುಗಳೊಂದಿಗೆ ವಿಲೀನ ಮಾಡುತ್ತಾರೆ. ಪವಿತ್ರವಾದ ರಿಸರ್ವ್ ಬ್ಯಾಂಕ್ ದೇಶದ ಆರ್ಥಿಕತೆಯ ಬುನಾದಿ. ಇವತ್ತು ರಿಸರ್ವ್ ಬ್ಯಾಂಕ್​ ಫಂಡ್‌ ಅನ್ನೇ ಕೇಂದ್ರ ಪಡೆದಿದೆ. ಆರ್ಥಿಕ ತುರ್ತು ಪರಿಸ್ಥಿತಿ ಇದ್ದಾಗ ಮಾತ್ರ ಹೀಗೆ ಮಾಡುತ್ತಾರೆ. ಈಗ ದೇಶದಲ್ಲಿ ಅಘೊಷಿತ ಆರ್ಥಿಕ ತುರ್ತು ಪರಿಸ್ಥಿತಿ ಉಂಟಾಗಿದೆ. ವಿಲೀನ ನಿರ್ಧಾರದಿಂದ ಕರಾವಳಿಯ ಬ್ಯಾಂಕಿಂಗ್ ಚರಿತ್ರೆಗೆ ಧಕ್ಕೆಯಾಗಿದೆ ಎಂದರು. (ದಿಗ್ವಿಜಯ ನ್ಯೂಸ್)

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...