ವಿರೋಧ ಪಕ್ಷದವರ ಹೇಳಿಕೆ ಸಚಿವೆ ಶಶಿಕಲಾ ಆಕ್ರೋಶ

ಬೆಳಗಾವಿ: ಕರೊನಾ ವೈರಸ್ ಹರಡುತ್ತಿರುವುದರಿಂದ ಜನರು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಇಂತಹ ಕಷ್ಟದ ಸಮಯದಲ್ಲಿ ವಿರೋಧ ಪಕ್ಷದವರು ವೈರಸ್ ಬಗ್ಗೆ ಎಷ್ಟು ಎಚ್ಚರಿಕೆ ವಹಿಸಿದ್ದಾರೆ ಎಂಬುದು ಮಾಜಿ ಸಚಿವ ಜಮೀರ್ ಅಹ್ಮದ್ ಹೇಳಿಕೆಯಿಂದ ತಿಳಿದು ಬರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಜಮೀರ್ ಅಹ್ಮದ್ ಅವರು ಆಶಾ ಕಾರ್ಯಕರ್ತೆಯರು ಯಾಕೆ ಮನೆ ಮನೆಗೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ. ಕರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಮತ್ತು ಸೋಂಕನ್ನು ಸಂಪೂರ್ಣ ನಾಶಪಡಿಸಲು ಸರ್ಕಾರಗಳು ಹಗಲಿರುಳು ಶ್ರಮಿಸುತ್ತಿವೆ. ಆದರೆ, ವಿರೋಧ ಪಕ್ಷದ ನಾಯಕರು ಮಾತನಾಡುತ್ತಿರುವ ರೀತಿ ಅವರ ಮನೋಪ್ರವೃತ್ತಿ ತೋರಿಸುತ್ತದೆ ಎಂದರು.

ದೆಹಲಿಯ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರಿಗೆ ಕರೊನಾ ವೈರಸ್ ದೃಢಪಟ್ಟಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು ಸೋಂಕಿತರ ಸಂಪರ್ಕದಲ್ಲಿರುವವರ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಬೆಂಗಳೂರಿನಲ್ಲಿ ಕೆಲ ಕಿಡಿಗೇಡಿಗಳು ಅವರ ಮೇಲೆ ಹಲ್ಲೆ ನಡೆಸಿರುವುದು ಸರಿಯಲ್ಲ. ಇಂತಹ ಘಟನೆಗಳಿಗೆ ಯಾರೂ ಬೆಂಬಲಿಸಬಾರದು ಎಂದರು. ಗರ್ಭಿಣಿಯರು ಅಥವಾ ಬಾಣಂತಿಯರು ಇರುವ ಮನೆ ಮನೆಗೆ ಹೋಗಿ ಪಡಿತರ ಸರಬರಾಜು ಮಾಡಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವೆ ಶಶಿಕಲಾ ತಿಳಿಸಿದರು.

Share This Article

ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips

ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…

ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…

ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower

ಬೆಂಗಳೂರು:  ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…