ಮಾಜಿ ಶಾಸಕ, ಹಿರಿಯ ರಾಜಕಾರಣಿ ಕೆ.ಮಲ್ಲಪ್ಪ ನಿಧನ

ದಾವಣಗೆರೆ: ಮಾಜಿ ಶಾಸಕ, ಹಿರಿಯ ರಾಜಕಾರಣಿ ಕೆ.ಮಲ್ಲಪ್ಪ (92) ಸೋಮವಾರ ಬೆಳಗ್ಗೆ ನಿಧನರಾದರು. ಜಿಲ್ಲೆಯ ಮಾಯಕೊಂಡ ಹಾಗೂ ಹರಿಹರ ಕ್ಷೇತ್ರದಿಂದ ಒಟ್ಟು ಎರಡು ಬಾರಿ ಶಾಸಕರಾಗಿ, ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಅವರು 1978ರಲ್ಲಿ ಮೊದಲ ಬಾರಿಗೆ ದಾವಣಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. 1983 ರಲ್ಲಿ ಹರಿಹರ ಕ್ಷೇತ್ರದಿಂದ ಜನತಾ ಪಕ್ಷದಿಂಮೊದಲ ಬಾರಿ ಶಾಸಕರಾಗಿ ಆಯ್ಕೆಯಾದರು. 1985ರಲ್ಲಿ ಮಾಯಕೊಂಡ ಕ್ಷೇತ್ರದಿಂದ 2ನೇ ಬಾರಿ ವಿಧಾನಸಭೆಗೆ ಚುನಾಯಿತರಾದರು. ಒಂದು … Continue reading ಮಾಜಿ ಶಾಸಕ, ಹಿರಿಯ ರಾಜಕಾರಣಿ ಕೆ.ಮಲ್ಲಪ್ಪ ನಿಧನ