ಮಾಜಿ ಶಾಸಕರು ತೆರಳುತ್ತಿದ್ದ ಕಾರು-ಬೈಕ್​ ನಡುವೆ ಅಪಘಾತ: ಬೈಕ್ ಸವಾರ ಸಾವು

ಬೆಳಗಾವಿ: ಜಿಲ್ಲೆಯ ಕಬ್ಬೂರು ಹೊರವಲಯದಲ್ಲಿ ಮಾಜಿ ಶಾಸಕರು ತೆರಳುತ್ತಿದ್ದ ಕಾರು ಹಾಗೂ ಬೈಕ್​ ನಡುವೆ ಅಪಘಾತ ನಡೆದಿದ್ದು ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದಲ್ಲಿ ಮಾಜಿ ಶಾಸಕರ ಕಾರು ಸಹ ಪಲ್ಟಿಯಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಖಾನಾಪುರ ಮಾಜಿ ಶಾಸಕ ಅರವಿಂದ ಪಾಟೀಲ್ ಅವರು ಪತ್ನಿಯೊಂದಿಗೆ ಖಾಸಗಿ ಕಾರ್ಯಕ್ರಮವೊಂದಕ್ಕೆ ರಾಯಭಾಗ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ. ಅಪಘಾತ ನಡೆದ ನಂತರ ಕಾರು ಸಹ ಪಲ್ಟಿಯಾಗಿದ್ದು ಅಪಘಾತದಲ್ಲಿ ಶಾಸಕ ದಂಪತಿ ಸಣ್ಣಪುಟ್ಟ ಗಾಯಗಳಿಂದ ಬಚಾವಾಗಿದ್ದಾರೆ. ಆದರೆ, ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ರಾಯಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಸ್ಥಳಕ್ಕೆ ಸ್ಥಳೀಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್​)