More

    ನಿರಂತರ ಹೋರಾಟ ನಡೆಯುತ್ತಿದ್ದರೂ ಕಾವೇರಿ ನೀರಿನ ವಿಚಾರದಲ್ಲಿ ಸಿಗದ ನ್ಯಾಯ: ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು ಬೇಸರ

    ಮಂಡ್ಯ: ಕಾವೇರಿ ನೀರಿಗಾಗಿ ನಿರಂತರವಾಗಿ ಹೋರಾಟ ನಡೆಯುತ್ತಿದ್ದರೂ ರಾಜ್ಯಕ್ಕೆ ನ್ಯಾಯ ಸಿಗದಿರುವುದು ಬೇಸರ ವಿಷಯ ಎಂದು ಮದ್ದೂರಿನ ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು ಹೇಳಿದರು.
    ನಗರದ ಸರ್‌ಎಂವಿ ಪ್ರತಿಮೆ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಗೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಿರಂತರವಾಗಿ ಧರಣಿ ನಡೆಯುತ್ತಿದೆ. ಇದಕ್ಕೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ. ಆದರೂ ಕಾವೇರಿ ನೀರಿನ ವಿಚಾರದಲ್ಲಿ ನಮಗೆ ಅನ್ಯಾಯವಾಗುತ್ತಲೇ ಇದೆ ಎಂದು ಬೇಸರಿಸಿದರು.
    ಕಾವೇರಿ ನೀರು ಕರ್ನಾಟಕದಲ್ಲಿಯೇ ಹುಟ್ಟುತ್ತದೆ. ಆದರೂ ನಮಗೆ ಮೋಸವಾಗುತ್ತಿದೆ. ಕುಡಿಯುವ ನೀರಿಗೆ ಮೊದಲ ಆದ್ಯತೆಯಾಗಿದ್ದರೂ, ತ.ನಾಡಿನಲ್ಲಿ ಮೂರನೇ ಬೆಳೆಗೆ ನೀರು ಹರಿಸಲಾಗುತ್ತಿದೆ. ಇದು ನಿಜಕ್ಕೂ ವಿಪರ್ಯಾಸ. ಇನ್ನು ಎರಡು ರಾಜ್ಯದ ನಡುವೆ ವಿವಾದ ಉಂಟಾದಾಗ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಸಮಸ್ಯೆ ಇತ್ಯರ್ಥಗೊಳಿಸಬೇಕು ಎಂದು ಆಗ್ರಹಿಸಿದರು.
    ಧರಣಿಯಲ್ಲಿ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ, ಜಿಲ್ಲಾ ಒಕ್ಕಲಿಗರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಸುಜಾತಾ ಕೃಷ್ಣ, ದಸಂಸ ಎಂ.ವಿ.ಕೃಷ್ಣ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts