More

  ಜನಪರ ಯೋಜನೆಗಳನ್ನು ಜನರಿಗೆ ತಿಳಿಸಿ

  ಗಂಗಾವತಿ: ಸರ್ವ ಸಮುದಾಯದ ಹಿತಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದ ನರೇಂದ್ರ ಮೋದಿ ಸರ್ಕಾರದ ಕಾರ್ಯವನ್ನು ಮನೆಮನೆಗೆ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದು ಮಾಜಿ ಶಾಸಕ ಪರಣ್ಣಮುನವಳ್ಳಿ ಹೇಳಿದರು.

  ನಗರದ 26ನೇ ವಾರ್ಡ್ ಅಂಬೇಡ್ಕರ್ ಕಾಲನಿಯಲ್ಲಿ ಬಿಜೆಪಿ ನಗರ ಘಟಕದಿಂದ ಭಾನುವಾರ ಹಮ್ಮಿಕೊಂಡಿದ್ದ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

  10ವರ್ಷ ಅವಧಿಯಲ್ಲಿ ದೇಶವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಕೆಲಸ ಕೇಂದ್ರ ಸರ್ಕಾರದಿಂದಾಗಿದೆ. ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲೂ ಪರಿಣಾಮಕಾರಿ ಕೆಲಸವಾಗಿದ್ದು, ಜನಪರ ಯೋಜನೆಗಳನ್ನು ಜನರಿಗೆ ತಿಳಿಸುವ ಕೆಲಸವಾಗಬೇಕಿದೆ ಎಂದರು.

  ಬಿಜೆಪಿ ನಗರ ಘಟಕದ ಅಧ್ಯಕ್ಷ ಕಾಶೀನಾಥ ಚಿತ್ರಗಾರ ಮಾತನಾಡಿ, ಬಿಜೆಪಿ ಆಡಳಿತಾವಧಿಯಲ್ಲಿ ಜಾರಿಯಾದ ಯೋಜನೆಗಳು ಇಂದಿಗೂ ಜನಪ್ರಿಯವಾಗಿವೆ. ಬಡ ಮತ್ತ ಮಧ್ಯಮ ವರ್ಗಕ್ಕಾಗಿ ಹಲವು ಯೋಜನೆಗಳು ಜಾರಿಯಾಗಿವೆ ಎಂದರು. ನಂತರ ಬೂತ್ ಸಮಿತಿ ಕಾರ್ಯವೈಖರಿ ಪರಿಶೀಲಿಸಿದ್ದು, ಕೇಂದ್ರ ಸರ್ಕಾರದ ಯೋಜನೆಗಳ ಕರಪತ್ರಗಳನ್ನು ಮನೆಮನೆಗೆ ವಿತರಿಸಲಾಯಿತು.ಬಿಜೆಪಿ ಗುರುತಿನ ಕಮಲ ಚಿತ್ರವನ್ನು ಗೋಡೆ ಬರಹದ ಮೂಲಕ ಸಂಘಟನೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

  ಪದಾಧಿಕಾರಿಗಳಾದ ಶ್ರೀನಿವಾಸ ಧೂಳಾ, ಸಂಗಯ್ಯಸ್ವಾಮಿ ಸಂಶಿಮಠ, ಹನುಮಂತಪ್ಪ ಐಹೊಳೆ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts