More

    ಜ್ವಲಂತ ಸಮಸ್ಯೆ ಬಗೆಹರಿಸಲು ಎಚ್‌ಡಿಕೆ ಅನಿವಾರ್ಯ: ಶ್ರೀರಂಗಪಟ್ಟಣ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿಕೆ

    ಮಂಡ್ಯ: ಕೃಷಿ ಪ್ರಧಾನವಾಗಿರುವ ಮಂಡ್ಯ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಶಾಶ್ವತವಾಗಿ ಬಗೆಹರಿಸಿ ಸಮೃದ್ಧಗೊಳಿಸಲು ಎಚ್.ಡಿ.ಕುಮಾರಸ್ವಾಮಿ ಸಂಸದರಾಗಿ ಆಯ್ಕೆಯಾಗಬೇಕು. ಆ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕೃಷಿ ಸಚಿವರಾಗಿ ಕಾರ್ಯನಿರ್ವಹಿಸಬೇಕೆಂಬ ಅಭಿಲಾಷೆ ನಮ್ಮದಾಗಿದೆ ಎಂದು ಶ್ರೀರಂಗಪಟ್ಟಣ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದರು.
    ತಾಲೂಕಿನ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಳಗೊಳ, ಕೆ.ಶೆಟ್ಟಿಹಳ್ಳಿ, ಕಸಬಾ, ಅರಕೆರೆ, ಕೊತ್ತತ್ತಿ-1 ಹಾಗೂ 2ನೇ ವೃತ್ತಗಳಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರ, ಕ್ಷೇತ್ರ ವ್ಯಾಪ್ತಿಯ ಬಹುತೇಕ ಹಳ್ಳಿಗಳಿಗೆ ಭೇಟಿ ನೀಡಿ ನಾನೇ ಖುದ್ದು ಮತ ಯಾಚಿಸಿದ್ದೇನೆ. ಮೈತ್ರಿ ಪಕ್ಷಗಳ ಮುಖಂಡರು, ಕಾರ್ಯಕರ್ತರೂ ಸಹ ಕುಮಾರಸ್ವಾಮಿ ಪರ ಮತ ಯಾಚಿಸಿದ್ದಾರೆ ಎಂದರು.
    ಮೈತ್ರಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಪರಿಶ್ರಮ ಮತ್ತು ಮಂಡ್ಯ ಜಿಲ್ಲೆಯ ರೈತಾಪಿ ಜನರ ದೂರದೃಷ್ಟಿಯಿಂದ ಏ.26ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು 3 ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ. 8 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರವಾಗಿ ಉತ್ತಮ ಒಲವು ವ್ಯಕ್ತವಾಗಿದ್ದು, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಟ 50 ಸಾವಿರ ಮತಗಳ ಅಂತರ ದೊರೆಯಲಿದೆ ಎಂದರು.
    ತಾಲೂಕು ಜೆಡಿಎಸ್ ಅಧ್ಯಕ್ಷ ದಶರಥ, ಕಾರ್ಯಾಧ್ಯಕ್ಷ ತಗ್ಗಹಳ್ಳಿ ಪ್ರಸನ್ನ, ಯಲಿಯೂರು ದೇವರಾಜು, ವಿವೇಕ್, ತಿಲಕ್, ಶಂಕರೇಗೌಡ, ಮುಖೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts