ಭಾಷಣ ಮಾಡುವಾಗ ಕುಸಿದ ಮಾಜಿ ಶಾಸಕ

Published on

ಕಾಸರಗೋಡು: ಸಿಪಿಎಂ ರಾಜ್ಯ ಸಮಿತಿ ಸದಸ್ಯ, ಮಾಜಿ ಶಾಸಕ ಕೆ.ಪಿ ಸತೀಶ್ಚಂದ್ರನ್ ಪಕ್ಷದ ಸಭೆ ನಡೆಯುತ್ತಿದ್ದ ವೇದಿಕೆಯಲ್ಲಿ ಕುಸಿದು ಬಿದ್ದಿದ್ದು, ತಕ್ಷಣ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸುತ್ತಿದ್ದಾರೆ. ಸಿಪಿಎಂನ ವಿವಿಧ ವಲಯ ಸಮ್ಮೇಳನದ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎಳೇರಿ ವಲಯದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದಂತೆ ಅಸೌಖ್ಯಗೊಂಡಿದ್ದರು. ತಕ್ಷಣ ಇವರನ್ನು ಕುರ್ಚಿಯಲ್ಲಿ ಕುಳ್ಳಿರಿಸಿದರೂ, ಅಲ್ಲೆ ಕುಸಿದ ಹಿನ್ನೆಲೆಯಲ್ಲಿ ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net