16 C
Bangalore
Thursday, December 12, 2019

ಹಿರಿಯ ರಾಜಕಾರಣಿ ಎ ಕೆ ಸುಬ್ಬಯ್ಯ ಅನಾರೋಗ್ಯದಿಂದ ನಿಧನ

Latest News

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಬೆಂಗಳೂರು: ರಾಜ್ಯದ ಹಿರಿಯ ರಾಜಕಾರಣಿ, ಹೋರಾಟಗಾರ, 85 ವರ್ಷದ ಎ.ಕೆ. ಸುಬ್ಬಯ್ಯ ಅವರು ಮಂಗಳವಾರ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.

ರಾಜ್ಯ ಬಿಜೆಪಿಯ ಪ್ರಥಮ ಅಧ್ಯಕ್ಷರಾಗಿದ್ದ ಎ ಕೆ ಸುಬ್ಬಯ್ಯ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಮಧ್ಯಾಹ್ನ 2.47ಕ್ಕೆ ನಿಧನರಾಗಿದ್ದಾರೆ.

ಕಳೆದೊಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತಮ್ಮ ಬೆಂಗಳೂರಿನ ನಿವಾಸದಲ್ಲಿದ್ದುಕೊಂಡು ವಾರಕ್ಕೆ ಮೂರು ದಿನ ಡಯಾಲಿಸಿಸ್‌ಗೆ ಒಳಲಾಗುತ್ತಿದ್ದರು. ವಿರಾಜಪೇಟೆ ತಾಲೂಕಿನ ಬೆಳ್ಳೂರು ಗ್ರಾಮದ ಸುಬ್ಬಯ್ಯ ಅವರನ್ನು ಅರೋಗ್ಯ ಸ್ಥಿತಿ ಗಂಭೀರವಾದ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅರ್ಧ ಗಂಟೆಗೆ‌ ಮೊದಲು ಮಾಜಿ ಪ್ರಧಾನಿ ದೇವೇಗೌಡ ಅವರು ಆಸ್ಪತ್ರೆಗೆ ಭೇಟಿ, ಆರೋಗ್ಯ ವಿಚಾರಣೆ ನಡೆಸಿದ್ದರು.

1934ರ ಆ. 9ರಂದು ಅಜ್ಜಿಕುಟ್ಟಿರ ಕಾರ್ಯಪ್ಪ ಮತ್ತು ಚಿಣ್ಣವ್ವ ದಂಪತಿಯ ಏಕೈಕ ಪುತ್ರ ಎ.ಕೆ. ಸುಬ್ಬಯ್ಯ ಅವರು ವಿರಾಜಪೇಟೆ ತಾಲೂಕು ಹಾಗು ಹರಿಹರದಲ್ಲಿ ಪ್ರಾಥಮಿಕ ಶಿಕ್ಷಣ, ಹುದಿಕೇರಿಯಲ್ಲಿ ಪ್ರೌಢ ಶಿಕ್ಷಣ, ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ಬಿಎಸ್ಸಿ ಪದವಿ, ಮೈಸೂರು ಶಾರದಾ ವಿಲಾಸ್ ಕಾಲೇಜಲ್ಲಿ ಎಲ್‌ಎಲ್‌ಬಿ ಮುಗಿಸಿದ್ದರು. ವಿರಾಜಪೇಟೆ ನ್ಯಾಯಾಲಯದಲ್ಲಿ ಪ್ರಾಕ್ಟೀಸ್ ಮಾಡಿ 1968ರಲ್ಲಿ ಹೈಕೋರ್ಟ್ ವಕೀಲರಾಗಿ ವೃತ್ತಿ ಆರಂಭಿಸಿದ್ದರು. 1964ರಲ್ಲಿ ಡಾಟಿ ಪೊನ್ನಮ್ಮ(ದಿವಂಗತ) ಅವರೊಂದಿಗೆ ವಿವಾಹವಾಗಿದ್ದರು. ಹೈಕೋರ್ಟ್ ಹಿರಿಯ ವಕೀಲ ಅಜ್ಜಿಕುಟ್ಟಿರ ಪೊನ್ನಣ್ಣ ಸೇರಿ ನಾಲ್ವರು ಪುತ್ರರು ಇದ್ದಾರೆ.
ರಾಜಕೀಯ ನಡೆ

ಆರಂಭದಲ್ಲಿ ಸಂಘ ಪರಿವಾರದ ಸಕ್ರಿಯ ಕಾರ್ಯಕರ್ತರಾಗಿದ್ದ ಸುಬ್ಬಯ್ಯ, 1984ರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇವರು ರಾಜ್ಯಾಧ್ಯಕ್ಷರಾಗಿದ್ದಾಗ ಮೊದಲ ಬಾರಿಗೆ ರಾಜ್ಯದಲ್ಲಿ ಬಿಜೆಪಿಯಿಂದ ಬಿ.ಎಸ್.ಯಡಿಯೂರಪ್ಪ ಸೇರಿ 14 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದರು.

4 ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಅದರಲ್ಲಿ 3 ಬಾರಿ ಬಿಜೆಪಿಯಿಂದ ಈಶಾನ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾದರೆ ಒಂದು ಬಾರಿ ಕಾಂಗ್ರೆಸ್‌ನಿಂದ ಪರಿಷತ್‌ಗೆ ಆಯ್ಕೆಯಾಗಿದ್ದರು. 2 ವರ್ಷ ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಕಾರ್ಯನಿರ್ವಹಿಸಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಹಪೇಯಿ ಜತೆ ನಿಕಟ ಸಂಬಂಧ ಹೊಂದಿದ್ದ ಸುಬ್ಬಯ್ಯ, ತುರ್ತು ಪರಿಸ್ಥಿತಿ ವೇಳೆ ಬಳ್ಳಾರಿಯಲ್ಲಿ ಹಾಗೂ ಬೆಂಗಳೂರಿನಲ್ಲಿ 19 ತಿಂಗಳು ಸೆರೆವಾಸ ಅನುಭವಿಸಿದ್ದರು. ಬೆಂಗಳೂರಿನಲ್ಲಿ ಎಲ್.ಕೆ. ಆಡ್ವಾಣಿ ಜತೆ ಜೈಲಿನಲ್ಲಿದ್ದರು. (ದಿಗ್ವಿಜಯ ನ್ಯೂಸ್)

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...