More

    ಮಾಜಿ ಸಂಸದ ಇಕ್ಬಾಲ್​ ಅಹ್ಮದ್ ಸರಡಗಿ ವಿಧಿವಶ

     ಕಲಬುರಗಿ : ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ (81) ಅವರು ಮಂಗಳವಾರ ತಡರಾತ್ರಿ ನಿಧನ ಹೊಂದಿದ್ದಾರೆ.

    ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಇಕ್ಬಾಲ್ ಅಹ್ಮದ್ ಸರಡಗಿಯವರು ಇಂದು ನಸುಕಿನ ಜಾವ 1 ಗಂಟೆಗೆ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇಕ್ಬಾಲ್ ಅವರು ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು.

    ದರ್ಗಾ ಪ್ರದೇಶದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.  ಸಂಜೆ 6 ಗಂಟೆಗೆ ಕಲಬುರಗಿಯಲ್ಲಿ ಇಕ್ಬಾಲ್​ ಅಹ್ಮದ್ ಸರಡಗಿ ಅಂತ್ಯಕ್ರಿಯೆ ನಡೆಯಲಿದೆ.

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ದಿ ಎನ್.ಧರ್ಮಸಿಂಗ್ ಪರಮಾಪ್ತರಾಗಿದ್ದ ಸರಡಗಿ 1999 ಮತ್ತು 2004 ರಲ್ಲಿ 2 ಬಾರಿ ಸಂಸದ, 1 ಬಾರಿ ಎಂಎಲ್​ಸಿ ಆಗಿ ಸೇವೆ ಸಲ್ಲಿಸಿದ್ದಾರೆ. 2009 ರಲ್ಲಿ ಕಲಬುರಗಿ ಮೀಸಲು ಕ್ಷೇತ್ರವಾದ ನಂತರ ಮಲ್ಲಿಕಾರ್ಜುನ ಖರ್ಗೆಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts