25.1 C
Bangalore
Friday, December 6, 2019

ವಿಜಯನಗರ ಜಿಲ್ಲೆ ರಚನೆ ವಿಚಾರ ಚುನಾವಣಾ ಸ್ಟಂಟ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆರೋಪ

Latest News

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು. ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ...

ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್​ಕೌಂಟರ್​​ ಅನ್ನು ಸ್ವಾಗತಿಸಿದ ಗೋವಾ ಕಾಂಗ್ರೆಸ್​​

ಪಣಜಿ: ಹೈದರಾಬಾದ್​ನಲ್ಲಿ ಶುಕ್ರವಾರ ಮುಂಜಾನೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಕೊಲೆ ಮಾಡಿದ್ದನ್ನು ಗೋವಾ ಕಾಂಗ್ರೆಸ್​ ಮಹಿಳಾ...

ಬಳ್ಳಾರಿ: ವಿಜಯನಗರ ಜಿಲ್ಲೆ ರಚನೆ ವಿಚಾರ ಚುನಾವಣೆಯ ಸ್ಟಂಟ್ ಆಗಿದೆ ಎಂದು ಮಾಜಿ ಸಂಸದ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ವಿ.ಎಸ್.ಉಗ್ರಪ್ಪ ಅಭಿಪ್ರಾಯಪಟ್ಟರು.

ಹೊಸ ಜಿಲ್ಲೆ ರಚಿಸಬೇಕಾದರೆ ಒಬ್ಬ ವ್ಯಕ್ತಿ ಅಲ್ಲ ಜಿಲ್ಲೆಯ ಜನರ ಅಭಿಪ್ರಾಯ ಮುಖ್ಯವಾಗಿದೆ. ಮೂರು ಬಾರಿ ಶಾಸಕರಾಗಿ, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಆನಂದ್‌ಸಿಂಗ್ ಯಾವತ್ತೂ ಜಿಲ್ಲೆ ರಚನೆ ಬಗ್ಗೆ ಮಾತನಾಡಿಲ್ಲ. ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾಗಲಿದೆ ಎಂಬ ಕಾರಣಕ್ಕೆ ಆನಂದ್‌ಸಿಂಗ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಈಗಲೇ ಸಂಘರ್ಷ ಆರಂಭವಾಗಿದೆ ಎಂದು ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಪಕ್ಷ ಒಡೆಯುವ ಪ್ರವೃತ್ತಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷ ಒಡೆಯುವ ಕೆಲಸ ಮಾಡಿಲ್ಲ. ಹುಬ್ಬಳ್ಳಿಯಲ್ಲಿ ಆಯೋಜಿತ ಬಿಜೆಪಿ ಸಭೆಯಲ್ಲಿ ಮುಖ್ಯಮಂತ್ರಿ ಆಡಿದ ಮಾತುಗಳನ್ನು ರೆಕಾರ್ಡ್ ಮಾಡಿದವರ ಹೆಸರು ಬಹಿರಂಗಪಡಿಸಲಿ. ಆಗ ಬಿಜೆಪಿಯ ಗುಂಪುಗಾರಿಕೆ ಬಹಿರಂಗವಾಗಲಿದೆ ಎಂದು ಸವಾಲೆಸೆದರು.

ಹೊಸಪೇಟೆಯ ಐಎಸ್‌ಆರ್ ಸಕ್ಕರೆ ಕಾರ್ಖಾನೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಶ್ರೀರಾಮುಲು ಈ ಹಿಂದೆ ಆನಂದ್‌ಸಿಂಗ್ ಅವರನ್ನು ರೈತ ವಿರೋಧಿ ಎಂದು ಆರೋಪಿಸಿದ್ದರು. ಇದೀಗ ಆನಂದ್‌ಸಿಂಗ್ ಪರ ಮತ ಕೇಳುತ್ತಿದ್ದಾರೆ. ಡಿಸಿಎಂ, ಸಿಎಂ ಆಗಬೇಕೆಂಬ ಮಹತ್ವಾಕಾಂಕ್ಷೆ ಹೊಂದಿರುವ ಶ್ರೀರಾಮುಲು ರಾಜಕೀಯ ಮುತ್ಸದ್ಧಿತನ ತೋರಿಸಬೇಕು. ರೈತರ ಕುರಿತು ಕಾಳಜಿ ಇದ್ದರೆ ಹಳೆಯ ಹೇಳಿಕೆಗಳಿಗೆ ಶ್ರೀರಾಮುಲು ಬದ್ಧವಾಗಿರಬೇಕು. ಕಾಂಗ್ರೆಸ್ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ಬದ್ಧತೆ ಇರುವ ರಾಜಕಾರಣಿಯಾಗಿದ್ದಾರೆ.

ಇದು ಪಕ್ಷ ನಿಷ್ಠರು, ಪಕ್ಷದ್ರೋಹಿಗಳು, ಗಣಿ ಜಮೀನನ್ನು ಬಿಟ್ಟು ಕೊಟ್ಟವರು, ಅಕ್ರಮ ಗಣಿಗಾರಿಕೆ ಮಾಡಿದವರ ನಡುವಿನ ಸ್ಪರ್ಧೆಯಾಗಿದೆ ಎಂದು ಉಗ್ರಪ್ಪ ಹೇಳಿದರು. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಹನುಮ ಕಿಶೋರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಸುಂಡಿ ನಾಗರಾಜಗೌಡ, ಕಾಂಗ್ರೆಸ್ ಕಿಸಾನ್ ಘಟಕದ ಮುಖಂಡ ರಘುರಾಮಕೃಷ್ಣ ಹಾಗೂ ಇತರರು ಹಾಜರಿದ್ದರು.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...