More

  ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಹೆಚ್ ಡಿ ದೇವೇಗೌಡ; ಕಾನೂನು ಕ್ರಮಕ್ಕೆ ತಕರಾರು ಇಲ್ಲ

   ಬೆಂಗಳೂರು: ಹೆಚ್ ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ  ಪ್ರಕರಣಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

  ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್  ಅವರೀಗ ಹೊರದೇಶದಲ್ಲಿದ್ದಾರೆ, ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳ ಬಗ್ಗೆ ತಮ್ಮ ಕುಟುಂಬದ ಪರವಾಗಿ ಹೆಚ್ ಡಿ ಕುಮಾರಸ್ವಾಮಿಯವರು ಸ್ಪಷ್ಟವಾದ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ಕಾನೂನಿನ ಪ್ರಕಾರ ಶಿಕ್ಷೆಯಾಗಲಿ ಅಂದಿದ್ದಾರೆ. ಆದರೆ, ಇಡೀ ಪ್ರಕರಣದಲ್ಲಿ ಬೇರೆ ಜನ ಸಹ ಶಾಮೀಲಾಗಿದ್ದಾರೆ ಅವರಿಗೂ ಶಿಕ್ಷೆಯಾಗಬೇಕು ಮತ್ತು ಸಂತ್ರಸ್ತೆಯರಿಗೆ ಪರಿಹಾರ ಸಿಗಬೇಕು. ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ತಾವು ಅದರ ಬಗ್ಗೆ ಮಾತಾಡಲ್ಲ. ಕೋರ್ಟ್ ತನ್ನ ತೀರ್ಪು ನೀಡಲಿದೆ  ಎಂದು ದೇವೇಗೌಡ ಹೇಳಿದರು.

  ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ಈ ಪ್ರಕರಣ ದಿನದಿಂದ ದಿನಕ್ಕೆ ರೋಚಕತೆ ಪಡೆದುಕೊಳ್ಳುತ್ತಿದೆ.  ವುದೇಶದಲ್ಲಿರುವ ಪ್ರಜ್ವಲ್​​ ಅಧಿಕಾರಿಗಳ ಕೈಗೆ ಸಿಗದೆ ಓಡಾಡುತ್ತಿದ್ದಾರೆ. ಪ್ರಜ್ವಲ್​ ರೇವಣ್ಣ ಈಗಾಗಲೇ 2 ಬಾರಿ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ. ಮೇ 03 ಮತ್ತು 15 ರಂದು ಭಾರತಕ್ಕೆ ಬರಲು ವಿಮಾನದ ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿದ್ದಾರೆ. ಹೀಗಾಗಿ ಅಧಿಕಾರಿಗಳು ಮುಂದಿನ ಟಿಕೆಟ್ ಬುಕ್ಕಿಂಗ್ ಮೇಲೆ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದಾರೆ.

  ವಿದೇಶದಲ್ಲಿರುವ ಪ್ರಜ್ವಲ್​ ಅಕೌಂಟ್​ಗೆ ಬೆಂಗಳೂರಿನಿಂದ ಹಣ ವರ್ಗಾವಣೆ; ಬ್ಯಾಂಕ್ ಖಾತೆ ಫ್ರೀಜ್ ಮಾಡಲು ಸಿದ್ಧತೆ ನಡೆಸಿದ ಎಸ್ಐಟಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts