More

    ಕಾಂಗ್ರೆಸ್​ಗೆ ಗುಡ್​ಬೈ ಹೇಳಿದ ಲಾಲ್​​ ಬಹದ್ದೂರ್​ ಶಾಸ್ತ್ರಿ ಮೊಮ್ಮಗ

    ಲಖನೌ: ಮುಂಬರುವ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್​ ಈ ಬಾರಿ ಬಿಜೆಪಿಯನ್ನು ಮಣಿಸಿ ಅಧಿಕಾರಕ್ಕೇರ ಬೇಕೆಂಬ ಹಂಬಲದಲ್ಲಿ ಸಿದ್ಧತೆಗಳನ್ನು ಆರಂಭಿಸಿದೆ. ಇನ್ನು ಈ ಮಧ್ಯೆ ಕಾಂಗ್ರೆಸ್​ಗೆ ಪಕ್ಷಾಂತರ ಪರ್ವ ಕೂಡ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಮಾಜಿ ಪ್ರಧಾನಿ ಲಾಲ್​ ಬಹದ್ದೂರ್​ ಶಾಸ್ತ್ರಿ ಮೊಮ್ಮಗ ವಿಭಾಕರ್​ ಶಾಸ್ತ್ರಿ ಕಾಂಗ್ರೆಸ್​ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

    ಉತ್ತರಪ್ರದೇಶ ಉಪಮುಖ್ಯಮಂತ್ರಿ ಬ್ರಿಜೇಶ್​ ಪಾಠಕ್​ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಭಾಕರ್​ ಶಾಸ್ತ್ರಿ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಟ್ಯಾಗ್​ ಮಾಡಿ ಟ್ವೀಟ್​ ಮಾಡಿದ್ದಾರೆ.

    ಇದನ್ನೂ ಓದಿ: ಕತಾರ್​ನಿಂದ ನೌಕಾಪಡೆಯ ಮಾಜಿ ಅಧಿಕಾರಿಗಳ ಬಿಡುಗಡೆಯಲ್ಲಿ ನನ್ನ ಪಾತ್ರವಿಲ್ಲ: ಶಾರುಖ್​ ಖಾನ್​

    ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಗುಣಗಳನ್ನು ಮೆಚ್ಚಿ ಸಾಮಾನ್ಯ ಕಾರ್ಯಕರ್ತನಾಗಿ ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾನು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ‘ಜೈ ಜವಾನ್, ಜೈ ಕಿಸಾನ್’ ದೃಷ್ಟಿಕೋನವನ್ನು ಇನ್ನಷ್ಟು ಬಲಪಡಿಸುವ ಮೂಲಕ ದೇಶಕ್ಕೆ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ಬಿಜೆಪಿ ಸೇರ್ಪಡೆ ಬಳಿಕ ಹೇಳಿದ್ದಾರೆ.

    ಕಳೆದ ಕೆಲ ದಿನಗಳಿಂದ ಅನೇಕ ಹಿರಿಯ ನಾಯಕರು ಕಾಂಗ್ರೆಸ್​ ತೊರೆದು ಬಿಜೆಪಿ ಸೇರ್ಪಡೆಯಾಗುತ್ತಿದ್ದು, ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆಯನ್ನು ತೋರಿಸುತ್ತಿದೆ. ಕೆಲ ದಿನಗಳ ಹಿಂದಷ್ಟೇ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ನ ಮೂವರು ಹಿರಿಯ ಹಾಗೂ ಪ್ರಭಾವಿ ನಾಯಕರು ಪಕ್ಷ ತೊರೆದು ಬಿಜೆಪಿ, ಶೀವಸೇನೆ ಹಾಗೂ ಎನ್​ಸಿಪಿ ಸೇರ್ಪಡೆಯಾಗಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts