More

    ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಚೇತರಿಕೆ

    ನವದೆಹಲಿ: ಎದೆನೋವಿನ ಸಂಬಂಧ ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಏಮ್ಸ್​) ಚಿಕಿತ್ಸೆ ಪಡೆಯುತ್ತಿದ್ದ ಅವರು ಮಂಗಳವಾರ ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಮರಳಿದರು.

    ಹೊಸ ಔಷಧವೊಂದಕ್ಕೆ ಅವರ ದೇಹ ವ್ಯತಿರಿಕ್ತವಾಗಿ ವರ್ತಿಸಿದ್ದರಿಂದ, ಅವರಲ್ಲಿ ಎದೆನೋವು ಹಾಗೂ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಅವರನ್ನು ಏಮ್ಸ್​ಗೆ ದಾಖಲಿಸಲಾಗಿತ್ತು.

    ಇದನ್ನೂ ಓದಿ: ಗಡಿಯಲ್ಲಿ ಚೀನಾದ ಉಪಟಳ; ಧಾವಿಸಿದ ಭಾರತೀಯ ವಾಯುಪಡೆ ವಿಮಾನ

    ಸೋಮವಾರದ ವೇಳೆಗೆ 87 ವರ್ಷದ ಮಾಜಿ ಪ್ರಧಾನಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಯಿತು. ಆದರೂ ಒಂದು ದಿನ ಅವರನ್ನು ನಿಗಾದಲ್ಲಿ ಇರಿಸಿ, ಮಂಗಳವಾರ ಅವರನ್ನು ಬಿಡುಗಡೆ ಮಾಡಲಾಯಿತು ಎಂದು ಏಮ್ಸ್​ ವೈದ್ಯರು ತಿಳಿಸಿದ್ದಾರೆ.

    ಕೊಂಚ ಜಾಗರೂಕತೆಯಿಂದಲೇ ‘ರಾಬರ್ಟ್​’ ಬೆಡಗಿಯ ಸಿಂಗಿಂಗ್​ ಟ್ಯಾಲೆಂಟ್ ನೋಡಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts