ಮೇರು ವ್ಯಕ್ತಿತ್ವದ ಅಜಾತಶತ್ರು ಅಟಲ್

Latest News

ಸಿರಿಯಾದಲ್ಲಿ ನಡೆದ ಕಾರು ಬಾಂಬ್​ ದಾಳಿಗೆ 10 ನಾಗರಿಕರ ಸಾವು, 15 ಮಂದಿಗೆ ಗಾಯ

ಸಿರಿಯಾ: ಇಲ್ಲಿನ ಅಲ್​ ಬಾಬ್​ ಸ್ಪುಟ್ನಿಕ್​ ನಗರದಲ್ಲಿ ಶನಿವಾರ ನಡೆದ ಕಾರ್​ ಬಾಂಬ್ ದಾಳಿಗೆ ಸುಮಾರು 10 ನಾಗರಿಕರು ಸಾವಿಗೀಡಾಗಿ, 15 ಮಂದಿ...

ಈ ಅರಿಭಯಂಕರ ವೇಗಿ ಭಾರತದ ಮಾಲ್ಕಂ ಮಾರ್ಷಲ್​ ಎಂದು ಸುನಿಲ್​ ಗಾವಸ್ಕರ್​ ಹೊಗಳಿದ್ದು ಯಾರನ್ನ?

ನವದೆಹಲಿ: ಭಾರತ ಕ್ರಿಕೆಟ್​ ತಂಡದಲ್ಲಿ ಹಿಂದೊಮ್ಮೆ ವೇಗಿಗಳನ್ನು ಚೆಂಡಿನ ಹೊಳಪನ್ನು ತೆಗೆದುಹಾಕಲು ಬಳಸುತ್ತಿದ್ದರು ಎಂದು ಹೇಳಲಾಗುತ್ತದೆ. ಆದರೆ ಇಂಥ ಒಂದು ನಂಬಿಕೆಯನ್ನು ನೀಗಿಸಿದವರು...

ಕೃಷಿ ಮಾರುಕಟ್ಟೆಯಲ್ಲಿ ರೈತನ ತರಕಾರಿ ಮೇಲೆ ಕಾರು ಚಲಾಯಿಸಿ ದರ್ಪ ತೋರಿದ ಕೃಷಿ ಅಧಿಕಾರಿ

ಹಾಪುರ್ (ಉತ್ತರ ಪ್ರದೇಶ): ಹಿರಿಯ ಕೃಷಿ ಅಧಿಕಾರಿಯೊಬ್ಬರು ರೈತನ ತರಕಾರಿ ಮೇಲೆ ಕಾರು ಚಲಾಯಿಸಿ ತರಕಾರಿ ನಾಶ ಮಾಡಿದ ಘಟನೆ ಹಾಪುರ್​ ಜಿಲ್ಲೆಯ...

ಸಂಸದ, ಮಾಜಿ ಕ್ರಿಕೆಟಿಗ ಗೌತಮ್​ ಗಂಭೀರ್​ ಕಾಣೆಯಾಗಿದ್ದಾರೆ ಹುಡುಕಿಕೊಡಿ: ದೆಹಲಿಯಲ್ಲಿ ಪತ್ತೆಯಾದ ನಾಪತ್ತೆ ಪೋಸ್ಟರ್​!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಲ್ಬಣಿಸಿರುವ ವಾಯುಮಾಲಿನ್ಯ ಪರಿಸ್ಥಿತಿಯನ್ನು ಕುರಿತು ಚರ್ಚಿಸಲು ಸಂಸದೀಯ ಸಮಿತಿ ಕರೆದಿದ್ದ ಸಭೆಗೆ ಗೈರುಹಾಜರಾದ ಪೂರ್ವ ದೆಹಲಿಯ ಬಿಜೆಪಿ...

ಮೂಡಬಿದರೆಯ ತೋಡಾರು ಗ್ರಾಮದ ಅಯ್ಯಪ್ಪ ಭಕ್ತರೊಂದಿಗೆ ಹೆಜ್ಜೆ ಹಾಕುತ್ತಿರುವ ಶ್ವಾನ

ಚಿಕ್ಕಮಗಳೂರು: ತಿರುಪತಿಯಿಂದ ಶಬರಿಮಲೆಗೆ ಪಾದಯಾತ್ರೆ ಮೂಲಕ ಹೊರಟಿರುವ ಭಕ್ತರ ತಂಡದ ಜತೆ ಶ್ವಾನವೊಂದು ತೆರಳಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯ...

<<ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಶ್ರದ್ಧಾಂಜಲಿ ಸಭೆ>>

ವಿಜಯಪುರ: ಮೇರು ವ್ಯಕ್ತಿತ್ವದ ಅಜಾತಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನದಿಂದಾಗಿ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ತತ್ವಾದರ್ಶಗಳನ್ನು ಇಂದಿನ ಪೀಳಿಗೆ ಪಾಲಿಸುವಂತಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಒಬ್ಬ ಮಹಾನ್ ಸೇನಾನಿಯನ್ನು ನಾವು ಕಳೆದುಕೊಂಡಿದ್ದೇವೆ. ವಾಜಪೇಯಿ ಅವರು ಯಾವತ್ತು ಪ್ರಧಾನ ಮಂತ್ರಿಗಳೆಂದು ತಮ್ಮ ಅಧಿಕಾರದ ದುರಪಯೋಗ ಮಾಡಿಕೊಂಡವರಲ್ಲ. ಸರಳ ಮತ್ತು ಸಜ್ಜನಿಕೆಯ ಜೀವನವನ್ನು ತಮ್ಮ ಬಾಲ್ಯದಿಂದಲೇ ನಡೆಸಿಕೊಂಡು ಬಂದಂತಹ ಒಬ್ಬ ಮಹಾನ್ ವ್ಯಕ್ತಿಯಾಗಿದ್ದರು ಎಂದು ಸ್ಮರಿಸಿದರು.

ರಾಜ್ಯ ಕಾರ್ಯಕಾರಿ ಸದಸ್ಯ ಚಂದ್ರಶೇಖರ ಕವಟಗಿ ಮಾತನಾಡಿ, ವಾಜಪೇಯಿ ಅವರು ವಿಜಯಪುರ ಜಿಲ್ಲೆಗೆ ಬಂದು ಪಕ್ಷದ ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದನ್ನು ನೆನಪಿಸಿಕೊಂಡರು. ಮೂರು ಬಾರಿ ವಿಜಯಪುರ ಜಿಲ್ಲೆಗೆ ವಾಜಪೇಯಿ ಅವರು ಭೇಟಿ ನೀಡಿದ್ದರು. ಆಗ ನನಗೆ ಪಕ್ಷದ ಜವಾಬ್ದಾರಿ ಇರಲಿಲ್ಲ, ಸಂಘದಲ್ಲಿದ್ದೆ. ಅವರನ್ನು ಬರಮಾಡಿಕೊಳ್ಳುವ ಸೌಭಾಗ್ಯ ನನಗೆ ದೊರಕಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ವಾಜಪೇಯಿ ಅವರಿಗೆ ಮಾನಸ ಪುತ್ರರಾಗಿ ಸೇವೆ ಮಾಡಿದಂತಹವರು. ವಾಜಪೇಯಿ ಅವರ ಆದರ್ಶವನ್ನು ಮುಂದಿಟ್ಟುಕೊಂಡು ದೇಶದ ಏಳಿಗೆಗಾಗಿ ಅವರು ರೂಪಿಸಿದಂತಹ ಯೋಜನೆಗಳನ್ನು ಮತ್ತು ಕನಸನ್ನು ನರೇಂದ್ರ ಮೋದಿ ಸಾಕಾರಗೊಳಿಸುತ್ತಿದ್ದಾರೆ ಎಂದು ತಿಳಿಸಿದರು.

ಪಕ್ಷದ ಧ್ವಜವನ್ನು ಅರ್ಧಕ್ಕೆ ಇಳಿಸುವುದರ ಮೂಲಕ ಗೌರವ ಸಲ್ಲಿಸಲಾಯಿತು. ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವಿಜುಗೌಡ ಪಾಟೀಲ, ಗೂಳಪ್ಪ ಶಟಗಾರ, ಶಿವಾನಂದ ಮಾನಕರ, ಪ್ರಕಾಶ ಅಕ್ಕಲಕೋಟ, ರವಿಕಾಂತ ಬಗಲಿ, ಸಂಗರಾಜ ದೇಸಾಯಿ, ವಿವೇಕ ಡಬ್ಬಿ, ಶಿವರುದ್ರ ಬಾಗಲಕೋಟ, ಶಂಭು ಕಕ್ಕಳಮೇಲಿ, ಸುಧಾಬಾಯಿ ಪಾಂಡೆ, ಸಂಜಯ ಪಾಟೀಲ ಕನಮಡಿ, ಅಶೋಕ ನ್ಯಾಮಗೊಂಡ, ಭೀಮಾಶಂಕರ ಹದನೂರ, ಪಾಲಿಕೆ ಸದಸ್ಯರಾದ ರಾಜು ಮಗಿಮಠ, ರಾಹುಲ್ ಜಾಧವ , ಪ್ರೇಮಾನಂದ ಬಿರಾದಾರ, ಉಮೇಶ ವಂದಾಲ, ರವೀಂದ್ರ ಲೋಣಿ, ಸಂತೋಷ ಚವಾಣ್, ಭಾಗಪ್ಪ ಕನ್ನೊಳ್ಳಿ, ಬಸವರಾಜ ಬಿರಾದಾರ, ರಾಜು ಬಿರಾದಾರ, ಮಳುಗೌಡ ಪಾಟೀಲ, ಉಮೇಶ ವೀರಕರ್, ರಾಘವ ಅಣ್ಣಿಗೇರಿ, ಚಂದ್ರು ಚೌಧರಿ, ಕಲಮೇಶ ಹಿರೇಮಠ, ಮಹೇಶ ಒಡೆಯರ, ಬಸವರಾಜ ಕುರುವಿನಶಟ್ಟಿ, ಶರಣು ಕಾಖಂಡಕಿ, ಬಾಬು ಶಿರಶ್ಯಾಡ ಇನ್ನಿತರರಿದ್ದರು.

- Advertisement -

Stay connected

278,507FansLike
569FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....