More

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಬೆಂಗಳೂರು: ಕಳೆದ 6 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಎಚ್​​.ಡಿ. ದೇವೇಗೌಡ ಅವರು ಇಂದು (ಮಾ.06) ಡಿಸ್ಚಾರ್ಜ್​ ಆಗಿದ್ದಾರೆ.

    ವೈದ್ಯರ ಸಲಹೆ ಮೇರೆಗೆ ಕಳೆದ ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಎಚ್​ಡಿಡಿ ದಾಖಲಾಗಿದ್ದರು. ಮೊಣಕಾಲು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಎಚ್​ಡಿಡಿ ಆಸ್ಪತ್ರೆಗೆ ತೆರಳುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.​ಡಿ. ಕುಮಾರಸ್ವಾಮಿ ಮಾಹಿತಿ ನೀಡಿದ್ದರು.

    ಇಂದು ಮುಂಜಾನೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಅವರು ಮನೆಗೆ ಮರಳಿದ್ದಾರೆ.

    ಇದನ್ನೂ ಓದಿ: ಅಸಮರ್ಥರ ವಜಾಗೊಳಿಸಲು ಪೊಲೀಸ್ ಇಲಾಖೆ ದಿಟ್ಟ ನಿರ್ಧಾರ

    ಕಳೆದ ಮಂಗಳವಾರ ಮಾತನಾಡಿದ್ದ ಎಚ್​ಡಿಕೆ, ದೇವೇಗೌಡರು ಇಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದಾರೆ. ಆಸ್ಪತ್ರೆಯಿಂದ ಬಂದ ಬಳಿಕ ಹಾಸನ ಕ್ಷೇತ್ರದ ಜೆಡಿಎಸ್​ ಟಿಕೆಟ್ ನೀಡಿಕೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದರು. ದೇವೇಗೌಡರ ಆರೋಗ್ಯ ಸ್ಥಿತಿ ಅಷ್ಟೊಂದು ಉತ್ತಮವಾಗಿಲ್ಲ ಎಂದು ತಿಳಿಸಿದ್ದರು.

    ದೇವೇಗೌಡರು ಆಸ್ಪತ್ರೆ ದಾಖಲಾಗಿರುವ ವಿಚಾರವಾಗಿ ಸಿಎಂ ಇಬ್ರಾಹಿಂ ಮಾತನಾಡಿ, ಅವರಿಗೆ ಕಾಲು, ಮಂಡಿ ನೋವಿದೆ. ಮನೆಯಲ್ಲಿ ರೆಸ್ಟ್ ಸಿಗುತ್ತಿಲ್ಲ. ಅವರು ನಾನು ಪ್ರವಾಸಕ್ಕೆ ಹೋಗಲೇ ಬೇಕು ಎನ್ನುತ್ತಿದ್ದಾರೆ. ಅವರನ್ನು ಭೇಟಿಯಾಗಲು ಜನ ಬಂದು ಹೋಗುವವರು ಹೆಚ್ಚಾಗಿದ್ದಾರೆ. ಅವರು ಆಸ್ಪತ್ರೆಯಲ್ಲಿ ಇದ್ದರೆ ಒಳ್ಳೆಯದು. ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಬಹುದು ಅಂತ ಆಸ್ಪತ್ರೆಗೆ ದಾಖಲಿಸಲಾಗಿದೆ. (ದಿಗ್ವಿಜಯ ನ್ಯೂಸ್​)

    ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಗೆ ದಾಖಲು…

    ನಮ್ಮ ಜತೆ ಬೆಡ್​ರೂಮ್​ಗೂ ಬಂದು ಬಿಡಿ… ಕರೀನಾ ಎದುರೇ ಹೀಗಂದಿದ್ಯಾಕೆ ನಟ ಸೈಫ್​ ಅಲಿ ಖಾನ್​?

    ನಿಜಕ್ಕೂ ಪವಾಡವೇ… 20 ಅಡಿ ಆಳದ ಹೊಂಡಕ್ಕೆ ಎಸೆದರೂ 2 ದಿನದ ಹಸುಗೂಸು ಬದುಕುಳಿದಿದ್ದೇ ರೋಚಕ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts