

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ರಾಜ್ಯಸಭೆ ಸದಸ್ಯರಾಗಿ ಇಂದು ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು.
ಜೂನ್ 12 ರಂದು ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಎಚ್ಡಿಡಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಜು.22ರಂದು ರಾಜ್ಯಸಭೆ ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಾಗಿತ್ತು. ಆದರೆ, ಅನಾರೋಗ್ಯ ಮತ್ತು ಕರೊನಾ ಸಾಂಕ್ರಾಮಿಕದ ಕಾರಣ ದೇವೇಗೌಡರು ನವದೆಹಲಿಗೆ ಪ್ರಯಾಣಿಸಲು ಆಗಿರಲಿಲ್ಲ.
ಸಂಸತ್ ಅಧಿವೇಶನ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯರಾಗಿ ಎಚ್ಡಿಡಿ ಪ್ರಮಾಣ ವಚನ ಸ್ವೀಕರಿಸಿದರು. ಕರೊನಾ ಪ್ರಕರಣಗಳ ಏರಿಕೆಯಿಂದಾಗಿ ಸಂಸತ್ ಅಧಿವೇಶನ ಮೊಟಕುಗೊಳ್ಳುವ ಸಾಧ್ಯತೆ ಇದೆ. (ಏಜೆನ್ಸೀಸ್)