ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆಗೆ ಗೌಡರ ಸಿದ್ಧತೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ಜಿಜ್ಞಾಸೆಗೆ ಬಿದ್ದಿರುವ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಸನದ ಬದಲಾಗಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ವೇದಿಕೆ ಸಿದ್ಧತೆಗೆ ಮುಂದಾಗಿದ್ದಾರೆ. ಇದಕ್ಕೆ ಪುಷ್ಠಿ ನೀಡುವಂತೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ ಶಾಸಕರು, ಪರಾಜಿತ ಅಭ್ಯರ್ಥಿಗಳು, ಪ್ರಮುಖ ಮುಖಂಡರನ್ನು ನಿವಾಸಕ್ಕೆ ಕರೆಸಿಕೊಂಡು ರ್ಚಚಿಸಿರುವ ಗೌಡರು, ಕ್ಷೇತ್ರದಲ್ಲಿ ಜೆಡಿಎಸ್​ನ ಬಲಾಬಲ ಕುರಿತಂತೆ ಮಾಹಿತಿ ಸಂಗ್ರಹಿಸಿದ್ದಾರೆ. ಕಾಂಗ್ರೆಸ್ ಬೆಂಬಲದೊಂದಿಗೆ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಫಲಿತಾಂಶ ಏನಾಗಬಹುದು ಎಂಬ ಕುರಿತಂತೆಯೂ ರ್ಚಚಿಸಿದ್ದು, ಅದಕ್ಕಾಗಿ ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.