More

    ಕಾಲುವೆ ಕೊನೆಭಾಗಕ್ಕೆ ಸಮರ್ಪಕ ನೀರು ಹರಿಸಿ

    ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆ ಕೊನೆಭಾಗಕ್ಕೆ ಸಮರ್ಪಕ ನೀರು ಹರಿಸುವಂತೆ ಒತ್ತಾಯಿಸಿ ನಗರದ ಹೊರವಲಯದ ಸಾಥ್ ಮೈಲ್ ಕ್ರಾಸ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಪಕ್ಷಾತೀತವಾಗಿ ಶನಿವಾರ ಸಂಚಾರ ತಡೆ ನಡೆಸಲಾಯಿತು.
    ಜಿಲ್ಲೆಯ ಮಾನ್ವಿ, ಸಿರವಾರ, ರಾಯಚೂರು ತಾಲೂಕಿನ ಉಪ ಕಾಲುವೆಗಳಿಗೆ ನೀರು ಹರಿಸದಿರುವುದರಿಂದ ಅಚ್ಚುಕಟ್ಟು ಪ್ರದೇಶದಲ್ಲಿ ಸೇಂಗಾ, ಮೆಣಸಿನಕಾಯಿ, ಹತ್ತಿ ಬೆಳೆಗಳು ನೀರಿಲ್ಲದೆ ಒಣಗುವ ಸ್ಥಿತಿಗೆ ಬಂದಿವೆ. ನೀರು ಹರಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಜಿಲ್ಲಾಡಳಿತ ಸ್ಪಂದನೆ ನೀಡಿಲ್ಲ.
    ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದಾಗ ಕಾಲುವೆ ಮೇಲ್ಭಾಗದಲ್ಲಿ ಅನಧಿಕೃತವಾಗಿ ನೀರು ಬಳಕೆ ತಡೆಗೆ ಕಠಿಣ ಕ್ರಮೈಗೊಳ್ಳುವಂತೆ ಆದೇಶ ಮಾಡಿದ್ದರೂ ನೀರಾವರಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಕೂಡಲೇ ಕಾಲುವೆ ಕೊನೆಭಾಗಕ್ಕೆ ನೀರು ಹರಿಸುವ ಮೂಲಕ ಬೆಳೆಗಳನ್ನು ಕಾಪಾಡುವಂತೆ ರೈತರು ಒತ್ತಾಯಿಸಿದರು.
    ಸಂಚಾರ ತಡೆ ನಡಿಸಿದ್ದರಿಂದ ಲಿಂಗಸುಗೂರು, ಸಿಂಧನೂರಿನಿಂದ ರಾಯಚೂರಿಗೆ ಬರುತ್ತಿದ್ದ ವಾಹನ ಸವಾರರು ಹಾಗೂ ಪ್ರಯಾಣಿಕರು ಪರದಾಡುವಂತಾಯಿತು.
    ಪ್ರತಿಭಟನೆಯಲ್ಲಿ ಶಾಸಕರಾದ ಡಾ.ಶಿವರಾಜ ಪಾಟೀಲ್, ರಾಜಾ ವೆಂಕಟಪ್ಪ ನಾಯಕ, ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ, ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್, ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್, ಪದಾಧಿಕಾರಿಗಳಾದ ಬೂದಯ್ಯ ಸ್ವಾಮಿ, ಬಸನಗೌಡ ಹಾಗೂ ನೂರಾರು ರೈತರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts