More

    ಫಲಿತಾಂಶಕ್ಕೂ ಮುನ್ನವೇ ಚಾಮುಂಡೇಶ್ವರಿ ಕ್ಷೇತ್ರದ ಸೋಲೊಪ್ಪಿಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ!

    ಮೈಸೂರು: ನಿನ್ನೆಯಷ್ಟೇ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದೆ. ಮೇ 13ಕ್ಕೆ ಬಹುನಿರೀಕ್ಷಿತ ಫಲಿತಾಂಶ ಹೊರಬೀಳಲಿದ್ದು, ಅದಕ್ಕೂ ಮುನ್ನವೇ ಚಾಮುಂಡೇಶ್ವರಿ ಕ್ಷೇತ್ರದ ಸೋಲನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಕೊಂಡಿದ್ದಾರೆ.

    ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯ ವಿರುದ್ಧ ಸಿದ್ದರಾಮಯ್ಯ ಅವರು ಅಸಮಾಧಾನ ಹೊರಹಾಕಿದ್ದಾರೆ. ಅಭ್ಯರ್ಥಿಯನ್ನು ಮೋಸಗಾರ ಎಂದು ಜರಿದಿದ್ದಾರೆ. ಅವನು ಈ ರೀತಿ ಮಾಡುತ್ತಾನೆ ಎಂದು ಮೊದಲೇ ಗೊತ್ತಿದ್ದರೆ, ನನ್ನ ಮಗನನ್ನೇ ಚುನಾವಣೆಗೆ ನಿಲ್ಲಿಸುತ್ತಿದ್ದೆ ಎಂದಿದ್ದಾರೆ.

    ಇದನ್ನೂ ಓದಿ: ವಾಟ್ಸ್​ಆ್ಯಪ್ ಬಳಕೆದಾರರ ಮೈಕ್ರೋಫೋನ್ ದುರ್ಬಳಕೆ?; ವಾಟ್ಸ್​ಆ್ಯಪ್​ ವಿಶ್ವಾಸಾರ್ಹ ಜಾಲತಾಣವಲ್ಲ ಎಂದ ಮಸ್ಕ್

    ಅಂದಹಾಗೆ ಚಾಮುಂಡೇಶ್ವರಿ ಕ್ಷೇತ್ರದ ಕೈ ಅಭ್ಯರ್ಥಿಯಾಗಿ ಮಾವಿನಹಳ್ಳಿ ಸಿದ್ದೇಗೌಡ ಕಣಕ್ಕಿಳಿದಿದ್ದಾರೆ. ಸಿದ್ದೇಗೌಡ ಮತ್ತು ಅವರ ತಂಡ ಜಿ.ಟಿ. ದೇವೇಗೌಡರ ನಡೆಯಿಂದ‌ ಬೇಸತ್ತು, ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ. ಜಿ.ಟಿ ದೇವೇಗೌಡರನ್ನು ಶತಾಯಗತಾಯ ಮಣಿಸಲೇ ಬೇಕು ಅಂತ ಮಾವಿನಹಳ್ಳಿ ಸಿದ್ದೇಗೌಡಗೆ ಸಿದ್ದರಾಮಯ್ಯ ಟಿಕೆಟ್ ಕೊಡಿಸಿದ್ದರು.

    ಆದರೆ, ಕಳೆದ ನಾಲ್ಕು ದಿನಗಳಿಂದ ಮತದಾರರ ಕೈಗೆ ಸಿಗದೆ ನಾಪತ್ತೆಯಾಗುವ ಮೂಲಕ ಜಿ.ಟಿ.ಡಿ ಗೆಲುವಿಗೆ ಪರೋಕ್ಷವಾಗಿ ಮಾವಿನಹಳ್ಳಿ ಸಿದ್ದೇಗೌಡ ಕಾರಣರಾಗಿದ್ದಾರೆ. ಹೀಗಾಗಿ ಕೈ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ನಡೆಗೆ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ. (ದಿಗ್ವಿಜಯ ನ್ಯೂಸ್​)

    ಜಗತ್ತನ್ನೇ ಕಬ್ಜಾ ಮಾಡಿಕೊಂಡ ತಂತ್ರಜ್ಞಾನ!; ಇಂದು ರಾಷ್ಟ್ರೀಯ ತಂತ್ರಜ್ಞಾನ ದಿನ

    ಮಾಹಿತಿಯ ಮಹತ್ವ: ತಂತ್ರಜ್ಞಾನದ ಬಳಕೆ ಮಿತಿಯಲ್ಲಿದ್ದರೆ ಉತ್ತಮ

    2615 ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರ: ಸಣ್ಣಪುಟ್ಟ ಗಲಾಟೆ ಹೊರತುಪಡಿಸಿ ಶಾಂತಿಯುತ ಮತದಾನ; ಫಲಿತಾಂಶದತ್ತ ಎಲ್ಲರ ಚಿತ್ತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts