More

  ಮತದಾನಕ್ಕೂ ಮುನ್ನ ಜಮ್ಮು-ಕಾಶ್ಮೀರದಲ್ಲಿ ಉಗ್ರರ ದುಷ್ಕೃತ್ಯ; ಬಿಜೆಪಿ ನಾಯಕ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ

  ಶ್ರೀನಗರ: ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಐದನೇ ಹಂತದ ಮತದಾನಕ್ಕೆ ಚುನಾವಣಾ ಆಯೋಗ ತಯಾರಿ ನಡೆಸಿದೆ. ಮತದಾನಕ್ಕೆ ಎರಡು ದಿನಗಳು ಬಾಕಿ ಇರುವ ಸಮಯದಲ್ಲಿ ಜಮ್ಮು-ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ.

  ಜಮ್ಮು-ಕಾಶ್ಮೀರದ ಶೋಫಿಯಾನ್​ ಹಾಗೂ ಅನಂತ್​ ನಾಗ್​ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

  ಇದನ್ನೂ ಓದಿ: ಐಪಿಎಲ್​ನಲ್ಲಿ ಮತ್ತೊಂದು ವಿವಾದಾತ್ಮಕ ತೀರ್ಪು; ನಾಟೌಟ್​ ಇದ್ದರೂ ಔಟ್​ ಎಂದ ಅಂಪೈರ್​

  ಶೋಫಿಯಾನ್​ ಜಿಲ್ಲೆಯ ಹುರ್​ಪುರ ಗ್ರಾಮದ ಮಾಜಿ ಸರ್​ಪಂಚ್, ಬಿಜೆಪಿ ಮುಖಂಡ​ ಐಜಾಜ್​ ಅಹ್ಮದ್​ ಶೇಖ್​ರನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದು, ಘಟನೆ ನಡೆದ ಪ್ರದೇಶದ ಸುತ್ತ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಈ ಮೊದಲು ತೀವ್ರವಾದಿ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಐಜಾಜ್​ ಕಾಲಕ್ರಮೇಣ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಯಾಗಿ ಪರಿವರ್ತನೆಗೊಂಡಿದ್ದರು. ಐಜಾಜ್​ ಅವರ ಹತ್ಯೆಯನ್ನು ಪೊಲೀಸರು ಖಚಿತಪಡಿಸಿದ್ದಾರೆ.

  ಅನಂತ್​ನಾಗ್​ ಜಿಲ್ಲೆಯ ಯನ್ನಾರ್​ ಪ್ರದೇಶದಲ್ಲಿ ಉಗ್ರರು ಜೈಪುರ ಮೂಲದ ದಂಪತಿ ಫರ್ಹಾ ಮತ್ತು ತರ್ಬೇಜ್​ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರ ದುಷ್ಕೃತ್ಯ ವ್ಯಾಪಕ ಖಂಡನೆಗೆ ಗುರಿಯಾಗಿದ್ದು, ಪಿಡಿಪಿ, ನ್ಯಾಷನಲ್​ ಕಾನ್ಫರೆನ್ಸ್​ ಹಾಗೂ ಬಿಜೆಪಿ ಘಟನೆಯನ್ನು ಖಂಡಿಸಿವೆ ಮತ್ತು ಕಠಿಣ ಕ್ರಮಕ್ಕೆ ಆಗ್ರಹಿಸಿವೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts