More

    ಪದವಿಪೂರ್ವ ಶಿಕ್ಷಣ ಇಲಾಖೆ ಯಥಾಸ್ಥಿತಿ, ಸಿಂಡಿಕೇಟ್ ಮಾಜಿ ಸದಸ್ಯ ಹರೀಶ್ ಆಚಾರ್ಯ ಅಗ್ರಹ

    ಮಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಅಧೀನಕ್ಕೆ ಒಳಪಡಿಸುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ತಕ್ಷಣವೇ ಹಿಂಪಡೆಯುವಂತೆ ಮಂಗಳೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಎಸ್.ಆರ್.ಹರೀಶ್ ಆಚಾರ್ಯ ಆಗ್ರಹಿಸಿದ್ದಾರೆ.

    ಪದವಿಪೂರ್ವ ಶಿಕ್ಷಣ ಇಲಾಖೆಯನ್ನು ಈ ಹಿಂದಿನಂತೆ ಜಿಲಾಧಿಕಾರಿಯವರ ಅಧೀನದಲ್ಲೇ ಮುಂದುವರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಪದವಿ ಶಿಕ್ಷಣ ಇಲಾಖೆಯ ಹೆಸರನ್ನು ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆ ಎಂದು ಬದಲಾಯಿಸಿ ಪ್ರೌಢಶಾಲಾ ವಿಭಾಗದಲ್ಲಿ ವಿಲೀನಗೊಳಿಸುವ ಪ್ರಕ್ರಿಯೆಗೆ ಸರ್ಕಾರ ಮುಂದಾಗಿದೆ. ಈಗಾಗಲೇ ಪದವಿಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷಾ ವಿಭಾಗವನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ವಿಲೀನಗೊಳಿಸಲಾಗಿದೆ. ಇದರಿಂದ ಪದವಿಪೂರ್ವ ಕಾಲೇಜಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧ್ಯಾಪಕರು ತೀವ್ರ ಆತಂಕಕ್ಕೊಳಗಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

    ಶೈಕ್ಷಣಿಕ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆಗಳು ಏಕಪಕ್ಷೀಯವಾಗಿ ನಡೆಯಬಾರದು. ಪ್ರಾಚಾರ್ಯರು, ಉಪನ್ಯಾಸಕರು ಮತ್ತು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಸಮನ್ವಯ ಸಾಧಿಸಿಕೊಂಡು ಮಾಡಬೇಕು. ರಾಜ್ಯ ಸರ್ಕಾರ ತಕ್ಷಣ ಎಲ್ಲ ಪ್ರಕ್ರಿಯೆಗಳನ್ನು ನಿಲ್ಲಿಸಿ ಶಿಕ್ಷಣ ತಜ್ಞರ ಸಭೆ ಕರೆದು ಒಮ್ಮತದ ನಿರ್ಣಯ ಕೈಗೊಳ್ಳಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts