More

    ಉಡುಪಿ ಮಾಜಿ ಶಾಸಕ ಯು.ಆರ್ ಸಭಾಪತಿ ವಿಧಿವಶ; ಸಿಎಂ ಸಂತಾಪ

    ಉಡುಪಿ: ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಯು. ಆರ್. ಸಭಾಪತಿ(71) ಅವರು ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಇಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

    ಸಂತಾಪ ಸೂಚಿಸಿದ ಸಿಎಂ

    ಮಾಜಿ ಶಾಸಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಯು.ಆರ್.ಸಭಾಪತಿ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಸಭಾಪತಿ ಅವರ ನಿಧನದಿಂದ‍ ಕರಾವಳಿಯ ಕಾಂಗ್ರೆಸ್ ಹಿಂದುಳಿದ ಸಮುದಾಯಕ್ಕೆ ಸೇರಿರುವ ಒಬ್ಬ ಸರ್ವಜನಪ್ರಿಯ ನಾಯಕನನ್ನು ಕಳೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

    1989ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಡುಪಿ ಕ್ಷೇತ್ರದಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯ ಅಭ್ಯರ್ಥಿಯಾಗಿ ಮನೋರಮಾ ಮಧ್ವರಾಜ್ ವಿರುದ್ಧ ಸ್ಪರ್ಧಿಸಿದ್ದರು. ಈ ವೇಳೆ ಅಲ್ಪ ಮತಗಳ ಅಂತರದಿಂದ ಸೋಲು ಕಂಡಿದ್ದರು. ಬಳಿಕ 1994ರ ಚುನಾವಣೆಯಲ್ಲಿ ಕೆಸಿಪಿ ಪಕ್ಷದಿಂದ ಹಾಗೂ 1999ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಅವಧಿಯಲ್ಲಿ ಕರಾವಳಿ ಭಾಗದ ಪ್ರಬಲ ಶಾಸಕರಾಗಿ ಸಭಾಪತಿ ಅವರು ಗುರುತಿಸಿಕೊಂಡಿದ್ದರು.

    ಇದನ್ನೂ ಓದಿ: ಸಿಎಂ ಆದ ಖುಷಿಗೆ RADO ವಾಚ್ ಗಿಫ್ಟ್ ಮಾಡಿದ ಸಿದ್ದರಾಮಯ್ಯ ಪತ್ನಿ!

    ಮಾಜಿ ಶಾಸಕ ಸಭಾಪತಿ ಅವರ ನಿಧನಕ್ಕೆ ಅನೇಕ ಗಣ್ಯರು, ರಾಜಕಾರಣಿಗಳು ಸಂತಾಪ ಸೂಚಿಸುತ್ತಿದ್ದಾರೆ. ಉಡುಪಿ ಕ್ಷೇತ್ರದ ಮಾಜಿ ಶಾಸಕ ರಘುಪತಿ ಭಟ್ ಅವರು ಟ್ವೀಟ್ ಮಾಡಿ ಸಂತಾಪ ತಿಳಿಸಿದ್ದು, ಉಡುಪಿ ಜಿಲ್ಲೆಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಮಾಜಿ ಶಾಸಕ ಯು. ಆರ್. ಸಭಾಪತಿ ಅವರ ನಿಧನದಿಂದ ದುಃಖವಾಗಿದೆ. ಅವರಿಗೆ ದೇವ ಸಾಯುಜ್ಯ ಪ್ರಾಪ್ತಿಯಾಗಲಿ ಎಂದು ಮತ್ತು ಕುಟುಂಬ ವರ್ಗಕ್ಕೆ, ಅಭಿಮಾನಿಗಳಿಗೆ ಅವರ ನಿಧನದ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ‌ ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts