More

    ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ವಿಧಿವಶ: ಪ್ರಧಾನಿ ಸಂತಾಪ

    ನವದೆಹಲಿ: ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ., ಅವರಿಗೆ 82 ವರ್ಷ ವಯಸ್ಸಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿ ಸರಣಿ ಟ್ವೀಟ್ ಮಾಡಿದ್ದು, ಅವರ ಕೊಡುಗೆಯನ್ನು ಸ್ಮರಿಸಿಕೊಂಡಿದ್ದಾರೆ.

    ಜಸ್ವಂತ್ ಸಿಂಗ್ ಜಿ ಅವರು ಶ್ರದ್ಧೆಯಿಂದ ನಮ್ಮ ದೇಶಸೇವೆ ಮಾಡಿದ್ದಾರೆ. ಆರಂಭದಲ್ಲಿ ಸೈನಿಕರಾಗಿ ನಂತರದಲ್ಲಿ ರಾಜಕಾರಣದ ಮೂಲಕ ಸೇವೆ ಸಲ್ಲಿಸಿದ್ದಾರೆ. ಅಟಲ್​ಜಿ ಅವರ ಸರ್ಕಾರ ಇದ್ದಾಗ, ಅವರು ಮಹತ್ವದ ಖಾತೆಗಳನ್ನು ನಿಭಾಯಿಸಿದ್ದರು. ಆರ್ಥಿಕ, ರಕ್ಷಣಾ ಮತ್ತು ವಿದೇಶ ವ್ಯವಹಾರ ಕ್ಷೇತ್ರದಲ್ಲಿ ಅಚ್ಚಳಿಯದ ಹೆಜ್ಜೆಗುರುತನ್ನು ಅವರು ಬಿಟ್ಟುಹೋಗಿದ್ದಾರೆ. ಅವರ ನಿಧನ ದುಃಖವನ್ನು ಉಂಟುಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮೊದಲ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

    ಇದನ್ನೂ ಓದಿ: ಮಥುರಾ ಕೃಷ್ಣ ಜನ್ಮಭೂಮಿ ಸ್ವಾಧೀನಕ್ಕೆ ಕಾನೂನು ಸಮರ

    ನಂತರದ ಎರಡು ಟ್ವೀಟ್​ಗಳಲ್ಲಿ ಅವರು, ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಜಸ್ವಂತ್ ಸಿಂಗ್ ಜಿ ಅವರು ತಮ್ಮ ವಿಶಿಷ್ಟ ಛಾಪಿನ ಮೂಲಕವೇ ಗುರುತಿಸಲ್ಪಡಲಿದ್ದಾರೆ. ಅವರು ಬಿಜೆಪಿಯನ್ನು ಸಂಘಟನಾತ್ಮಕವಾಗಿ ಬೆಳೆಸುವಲ್ಲಿ ಮಹತ್ವದ ಪಾತ್ರ ನಿಭಾಯಿಸಿದ್ದಾರೆ. ನಮ್ಮ ನಡುವಿನ ಮಾತುಕತೆ ಯಾವತ್ತೂ ನನ್ನ ನೆನಪಿನಲ್ಲಿರುತ್ತದೆ. ಕಳೆದ ಆರು ವರ್ಷಗಳ ಅವಧಿಯಲ್ಲಿ ಅವರು ತಮ್ಮ ಆರೋಗ್ಯ ಸಮಸ್ಯೆ ವಿರುದ್ಧ ಸಾಕಷ್ಟು ಹೋರಾಡಿದ್ದಾರೆ.ಅವರ ಕುಟುಂಬ ಮತ್ತು ಬೆಂಬಲಿಗರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಪರಮಾತ್ಮ ಕೊಡಲಿ. ಮಾನವೇಂದ್ರ ಸಿಂಗ್ ಅವರೊಂದಿಗೆ ಮಾತನಾಡಿ ಸಂತಾಪ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

    ಷರಿಷತ್ ಸಭಾಪತಿಗಳ ನಡೆ ನಿಗೂಢ- ಅಂಪೈರ್ ಎಂದೂ ಹೀಗಿರಬಾರದು ಎಂದ ಸಚಿವ ಸುರೇಶ್ ಕುಮಾರ್ !

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts