ಸಂಸದ ಶಶಿ ತರೂರ್​ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್​ ದಾಖಲಿಸಿದ ರಾಜೀವ್​ ಚಂದ್ರಶೇಖರ್

Shashi Chandrashekar
Published on

ನವದೆಹಲಿ: ತಿರುವನಂತಪುರಂ ಕ್ಷೇತ್ರದ ಕಾಂಗ್ರೆಸ್​ ಸಂಸದ ಶಶಿ ತರೂರ್​ ವಿರುದ್ಧ ಮಾಜಿ ಕೇಂದ್ರ ಸಚಿವ ರಾಜೀವ್​ ಚಂದ್ರಶೇಖರ್​ ದೆಹಲಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಕೇಸ್​ ದಾಖಲಿಸಿದ್ದಾರೆ.

ಏಪ್ರಿಲ್​-ಮೇ ತಿಂಗಳಲ್ಲಿ ನಡೆದ ಲೋಕಸಭೆ ಚುನಾವಣೆ ಸಮಯದಲ್ಲಿ ಸಂಸದ ಶಶಿ ತರೂರ್​ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ, ಎಂದು ಆರೋಪಿಸಿ ರಾಜೀವ್​ ಚಂದ್ರಶೇಖರ್​ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಲೋಕಸಭೆ ಚುನಾವಣೆ ಸಮಯದಲ್ಲಿ ಖಾಸಗಿ ವಾಹಿನಿಗೆ ಸಂದರ್ಶನ ನೀಡಿದ್ದ ಸಂಸದ ಶಶಿ ತರೂರ್​ ಮಾತನಾಡುವ ವೇಳೆ, ರಾಜೀವ್​ ಚಂದ್ರಶೇಖರ್​ ಅವರು ಮತ ಪಡೆಯಲು ಜನರಿಗೆ ದುಡ್ಡು ಹಂಚುತ್ತಿದ್ದಾರೆ ಎಂದು ಹೇಳಿದ್ದರು. ಈ ಹೇಳಿಕೆ ನನ್ನ ತಮ್ಮ ಪ್ರತಿಷ್ಠೆಗೆ ಹಾನಿಯುಂಟು ಮಾಡಿದ್ದು, ಈ ಕಾರಣಕ್ಕಾಗಿ ಮಾನನಷ್ಟ ಮೊಕದ್ದಮೆ ದಾಖಲಿಸುತ್ತಿರುವುದಾಗಿ ಹೇಳಿದ್ದಾರೆ.

ದೆಹಲಿಯ ಪಟಿಯಾಲ ಹೌಸ್​ ಕೋರ್ಟ್​ನಲ್ಲಿ ಪ್ರಕರಣ ದಾಖಲಾಗಿದ್ದು, ಉದ್ದೇಶಿತ ಆರೋಪಿ (ಶಶಿ ತರೂರ್) ಸಂಸತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿರುವ ಕಾರಣ, ನ್ಯಾಯಾಲಯವು ಈ ವಿಷಯವನ್ನು ನಿಭಾಯಿಸುವ ಅಧಿಕಾರವನ್ನು ಹೊಂದಿಲ್ಲ. ಪರಿಣಾಮವಾಗಿ, ಮುಂದಿನ ಪ್ರಕ್ರಿಯೆಗಳಿಗೆ ಸೂಕ್ತವಾದ ನ್ಯಾಯವ್ಯಾಪ್ತಿಯೊಂದಿಗೆ ಪ್ರಕರಣವನ್ನು ನ್ಯಾಯಾಲಯಕ್ಕೆ ವರ್ಗಾಯಿಸಬೇಕಾಗುತ್ತದೆ ಎಂದು ಹೇಳಿದ ನ್ಯಾಯಾಧೀಶರು ವಿಚಾರಣೆಯನ್ನು ಆಗಸ್ಟ್​ 21ಕ್ಕೆ ಮೂಂದೂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net