ಮೆದುಳಿನಲ್ಲಿ ರಕ್ತಸ್ರಾವ, ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆಸ್ಪತ್ರೆಗೆ ದಾಖಲು

ramesh jigajinagi
Published on

ಬೆಳಗಾವಿ: ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಜಯಪುರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ  ಆರೋಗ್ಯ ಏರು ಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವದ ಹಿನ್ನೆಲೆಯಲ್ಲಿ ಬೆಳಗಾವಿ ಕೆಎಲ್‌ಇ ಆಸ್ಪತ್ರೆಗೆ  ಮಜಿ ಕೇಂದ್ರ ಸಚಿವ ದಾಖಲಾಗಿದ್ದಾರೆ.

ಜಿಗಜಿಣಗಿ ಆರೋಗ್ಯ ಚಿಂತಾಜನಕವಾಗಿದ್ದು, ವೈದ್ಯರು ತೀವ್ರ ನಿಗಾಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net