More

    ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಕಾಂಗ್ರೆಸ್​ಗೆ ಮತ್ತೊಂದು ಶಾಕ್; ಪಕ್ಷ ತೊರೆದ ಮಾಜಿ ಸಿಎಂ ಪುತ್ರ

    ನವದೆಹಲಿ: ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್​ ಅದಕ್ಕೆ ಮುನ್ನುಡಿ ಎಂಬಂತೆ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್​ ಮಾಡಿದೆ. ಆದರೆ, ಮೊದಲ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ಕಾಂಗ್ರೆಸ್​ ಪಾಳಯದಲ್ಲಿ ಅಸಮಾಧಾನದ ಕಟ್ಟೆ ಹೊಡೆದಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಭುವನ್ ಚಂದ್ರ ಖಂಡೂರಿ ಅವರ ಪುತ್ರ ಮನೀಶ್ ಖಂಡೂರಿ ಪಕ್ಷ ತೊರೆದಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಮನೀಷ್​, ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವ ಮತ್ತು ಎಲ್ಲಾ ಸಂಬಂಧಿತ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಿದ್ದೇನೆ. ಯಾವುದೇ ವೈಯಕ್ತಿಕ ಲಾಭದ ನಿರೀಕ್ಷೆ ಇಲ್ಲದೇ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

    ಇದನ್ನೂ ಓದಿ: ಐಪಿಎಲ್​​ ಆರಂಭಕ್ಕೂ ಮುನ್ನ ಗುಜರಾತ್​ ಟೈಟಾನ್ಸ್​ಗೆ ಮತ್ತೊಂದು ಶಾಕ್; ಟೂರ್ನಿಗೆ ಪ್ರಮುಖ ಆಟಗಾರ ಅಲಭ್ಯ

    2019ರಲ್ಲಿ ಕಾಂಗ್ರೆಸ್​ ಸೇರ್ಪಡೆಯಾಗಿದ್ದ ಮನೀಷ್​ ಗರ್ವಾಲ್ (ಪೌರಿ) ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ತೀರತ್ ಸಿಂಗ್ ರಾವತ್ ಅವರ ವಿರುದ್ಧ ಸೋಲುಂಡಿದ್ದರು. ಈ ಬಾರಿಯೂ ಈ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಮನೀಷ್​ ಅವರಿಗೆ ಟಿಕೆಟ್​ ಕೈ ತಪ್ಪುವ ಸಾಧ್ಯತೆ ಹೆಚ್ಚಿದ ಕಾರಣ ಕಾಂಗ್ರೆಸ್​ ತೊರೆದಿದ್ದಾರೆ ಎಂದು ಉನ್ನತ ಸುದ್ದಿ ಮೂಲಗಳು ತಿಳಿಸಿವೆ.

    ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರಾಖಂಡ ಬಿಜೆಪಿ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಮಹೇಂದ್ರ ಭಟ್ ಚುನಾವಣೆ ಹೊಸ್ತಿಲಲ್ಲಿ ಎಲ್ಲರೂ ಕಾಂಗ್ರೆಸ್​ ತೊರೆಯುತ್ತಿದ್ದಾರೆ. ನಾನು ಅವರಿಗೆ ಬಿಜೆಪಿಗೆ ಬರುವಂತೆ ಮನವಿ ಮಾಡುತ್ತೇನೆ. ಅವರ ತಂದೆ ಹಾಗೂ ಸಹೋದರಿ ಬಿಜೆಪಿಯ ಹಿರಿಯ ನಾಯಕರಾಗಿದ್ದು, ಅವರು ಬಂದರೆ ಪಕ್ಷಕ್ಕೆ ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts