More

    ಟಿಎಂಸಿ ಸರ್ಕಾರ ಉರುಳಿಸೋವರೆಗೂ ತಲೆಗೂದಲು ಬೆಳೆಸಲ್ಲ; ಶಪಥ ಮಾಡಿ ಬಿಜೆಪಿ ಸೇರ್ಪಡೆಯಾದ ಕೈ ನಾಯಕ

    ಕಲ್ಕತ್ತಾ: ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ದತೆ ಠಾರಂಭಿಸಿದ್ದು, ಅದಕ್ಕೆ ಮುನ್ನುಡಿ ಎಂಬಂತಗೆ ಪಕ್ಷಾಂತರ ಪರ್ವ ಕೂಡ ಶುರುವಾಗಿದೆ. ಇದೀಗ ಪಶ್ಚಿಮ ಬಂಗಾಳದಲ್ಲಿ ಪ್ರಭಾವಿ ಕಾಂಗ್ರೆಸ್​ ನಾಯಕ ಎಂದು ಗುರುತಿಸಿಕೊಂಡಿದ್ದ ಕೌಸ್ತವ್ ಬಾಗ್ಚಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

    ಪಶ್ಚಿಮ ಬಂಗಾಳದ ರಾಜಧಾನಿ ಕಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸೇರ್ಪಡೆಗೊಂಡ ಬಾಗ್ಚಿ ಅವರನ್ನು ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ, ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ ಸ್ವಾಗತಿಸಿ ಶುಭ ಹಾರೈಸಿದ್ದಾರೆ.

    ಈ ಹಿಂದೆ ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ ಎಂದು ಆರೋಪಿಸಿ ಕೌಸ್ತವ್​ ಬಾಗ್ಚಿ ಅವರನ್ನು ಬಂಧಿಸಲಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ ಕೌಸ್ತವ್​ ಬಾಗ್ಚಿ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸರ್ಕಾರ ಉರುಳಿಸುವವರೆಗೂ ತಲೆ ಕೂದಲು ಬೆಳೆಸುವುದಿಲ್ಲ ಎಂದು ಶಪಥ ಮಾಡಿ ಬಿಜೆಪಿ ಸೇರ್ಪಡೆಯಾಗಿದ್ಧಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts