More

  ಭೂಸ್ವಾಧೀನ ವಿರೋಧಿ ಹೋರಾಟ ತೀವ್ರಗೊಳಿಸಲು ನಿರ್ಧಾರ

  ವಿಜಯವಾಣಿ ಸುದ್ದಿ ಜಾಲ ಚನ್ನರಾಯಪಟ್ಟಣ
  ಭೂಸ್ವಾಧೀನ ವಿರೋಧಿಸಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಹೋರಾಟ 802 ದಿನ ಪೂರೈಸಿದ ಹಿನ್ನೆಲೆಯಲ್ಲಿ ಧರಣಿ ಸ್ಥಳದಲ್ಲಿ ಸಭೆ ಸೇರಿ ರೈತರು ಮಾತುಕತೆ ನಡೆಸಿದರು.
  ಈ ಹಿಂದೆ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದಿಯಾಗಿ ಧರಣಿ ಸ್ಥಳಕ್ಕೆ ಬಂದು ಲೋಕಸಭೆ ಚುನಾವಣೆ ನಂತರ ಸರ್ಕಾರದೊಂದಿಗೆ ಮಾತುಕತೆ ನಡೆಸಲು ವೇದಿಕೆ ಕಲ್ಪಿಸುವುದಾಗಿ ರೈತರಿಗೆ ಭರವಸೆ ನೀಡಿ ಮತದಾನ ಮಾಡಲು ಮನವಿ ಮಾಡಿಕೊಂಡಿದ್ದರು. ಆದರೆ, ಚುನಾವಣೆ ಮುಗಿದು ಕೇಂದ್ರದಲ್ಲಿ ಸರ್ಕಾರ ರಚನೆಯಾಗಿದೆ. ಜಿಲ್ಲಾಡಳಿತ ಮತ್ತು ಸರ್ಕಾರದ ಮಂತ್ರಿಗಳು ಕೊಟ್ಟ ಮಾತಿನಂತೆ ಮಾತುಕತೆಗೆ ಅನುವು ಮಾಡಿಲ್ಲ ಎಂದು ಸಭೆಯಲ್ಲಿ ಅಸಮಾಧಾನ ವ್ಯಕ್ತವಾಯಿತು.
  ರೈತ ಹೋರಾಟಗಾರ ಕಾರಳ್ಳಿ ಶ್ರೀನಿವಾಸ್ ಮಾತನಾಡಿ, ಮುಂದಿನ ಹೋರಾಟ ಕುರಿತು ಅಭಿಪ್ರಾಯ ಸಂಗ್ರಹಿಸಲಾಗಿದ್ದು, ಜಿಲ್ಲಾಧಿಕಾರಿ ಭೇಟಿಯಾಗಿ ಶೀಘ್ರದಲ್ಲಿ ಸಭೆ ಕರೆಯುವಂತೆ ಒತ್ತಾಯ ಮಾಡುವುದು ಮತ್ತು ಸಿಎಂ ಜತೆ ಮಾತುಕತೆ ಮಾಡಿಸಲು ಜವಾಬ್ದಾರಿ ತೆಗೆದುಕೊಂಡಿದ್ದ ಉಸ್ತುವಾರಿ ಸಚಿವರನ್ನು ಎಚ್ಚರಿಸುವ ಕೆಲಸ ಮಾಡಬೇಕೆಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ ಎಂದರು.
  ನಮ್ಮ ಸುತ್ತಲ ರೈತರೊಂದಿಗೆ ಸಹಿ ಸಂಗ್ರಹದ ಮೂಲಕ ಜಾಗೃತಿಗೆ ಮುಂದಾಗುವಂತೆ ಕರ್ನಾಟಕ ಪ್ರಾಂತ್ಯ ರೈತಸಂಘದ ಯಶವಂತ್ ಸಲಹೆ ನೀಡಿದರು. ವಿವಿಧ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು.

  See also  ಜೋತುಬಿದ್ದ ವಿದ್ಯುತ್ ತಂತಿ, ವಾಲಿದ ಕಂಬಗಳನ್ನು ಸರಿಪಡಿಸಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts