More

    ರೈತರ ಪಂಪಸೆಟ್‌ಗಳಿಗೆ ಮೀಟರ್ ಅಳವಡಿಕೆ ಬೇಡ; ರೈತ ಸಂಘದಿಂದ ಪ್ರತಿಬಟನೆ

    ಹಾವೇರಿ: ಕೇಂದ್ರ ಸರ್ಕಾರ ಹಿಂಪಡೆದ 3 ಕೃಷಿ ಕಾಯ್ದೆಗಳನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ವಿದ್ಯುತ್ ಖಾಸಗೀಕರಣ ವಿಚಾರ ಕೈಬಿಡಬೇಕು, ರೈತರ ಪಂಪಸೆಟ್‌ಗಳಿಗೆ ಮೀಟರ್ ಅಳವಡಿಸುವ ಕಾರ್ಯವನ್ನು ನಿಲ್ಲಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಡಳಿತ ಕಚೇರಿಯ ಎದುರು ಸೋಮವಾರ ಪ್ರತಿಭಟನೆ ಮಾಡಲಾಯಿತು.
    ಈ ವೇಳೆ ರಾಜ್ಯ ಸಂಚಾಲಕ ಹನುಮಂತಪ್ಪ ದೀವಿಗಿಹಳ್ಳಿ ಮಾತನಾಡಿ, ರಾಜ್ಯ ಸರ್ಕಾರ ರೈತರ ಬೆಳೆಗಳಿಗೆ ಕಾನೂನಾತ್ಮಕ ಬೆಲೆಯನ್ನು ನಿಗದಿ ಪಡಿಸಬೇಕು. ತರಕಾರಿ ಬೆಳೆಗಳಿಗೆ ಕೇರಳ ಮಾದರಿಯಲ್ಲಿ ಬೆಲೆ ನಿಗದಿಪಡಿಸಬೇಕು. ರಾಜ್ಯಾದ್ಯಂತ ಬಗರ್ ಹುಕುಂ ಸಾಗುವಳಿದಾರರು ಸುಮಾರು ವರ್ಷಗಳಿಂದ ಉಳುಮೆ ಮಾಡುತ್ತಿರುವ ರೈತರಿಗೆ ‘ಡ’ ಹಾಗೂ ‘ಪಟ್ಟಾ’ ನೀಡಬೇಕು.
    ಖಾಸಗಿ ಗೋಲ್ಡ್ ಲೋನ್ ಕಂಪನಿಗಳಲ್ಲಿ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರು ಅಡವಿಟ್ಟ ಬಂಗಾರದ ಒಡವೆಗಳನ್ನು 3 ತಿಂಗಳ ಒಳಗೆ ಹರಾಜು ಹಾಕಿ ರೈತರಿಗೆ ಮತ್ತು ರೈತ ಮಹಿಳೆಯರಿಗೆ ಮೋಸ ಮಾಡುತ್ತಿದ್ದಾರೆ. ರೈತರ ಒಪ್ಪಿಗೆ ಪಡೆಯದೇ ಬಂಗಾರ ಹರಾಜು ಮಾಡಿ ಮೋಸ ಮಾಡುತ್ತಿದ್ದಾರೆ. ಈ ಕಂಪನಿಗಳು ಈಗಾಗಲೇ ಈ ರೀತಿ ಹರಾಜು ಮಾಡಿರುವ ಚಿನ್ನವನ್ನು ಮಹಿಳೆಯರಿಗೆ ವಾಪಾಸ್ ಕೊಡಿಸಬೇಕು. ಈ ಬಗ್ಗೆ ಸರ್ಕಾರ ಕಠಿಣ ನಿಯಮ ಜಾರಿಗೊಳಿಸಬೇಕು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts