ನಗರದಲ್ಲಿ ಗಾಂಜಾ ಗಿಡ ಪತ್ತೆ: ಅಬಕಾರಿ ನಿರೀಕ್ಷಕಿ ವನಿತಾ ನೇತೃತ್ವದಲ್ಲಿ ಕಾರ್ಯಾಚರಣೆ

Found two Gaanja plants Mandya

ಮಂಡ್ಯ: ನಗರದ ಜಿಲ್ಲಾ ಭೂ ದಾಖಲೆ ನೌಕಕರ ಸಂಘದ ಆವರಣದಲ್ಲಿ ಎರಡು ಗಾಂಜಾ ಗಿಡ ಬೆಳೆದಿರುವುದನ್ನು ಅಬಕಾರಿ ಪೊಲೀಸರು ಬುಧವಾರ ಪತ್ತೆ ಮಾಡಿದ್ದಾರೆ.
ಒಂದು ಗಿಡ 3 ಮೀಟರ್ ಮತ್ತು ಮತ್ತೊಂದು ಗಿಡ 1.9 ಮೀ ಉದ್ದ ಇದೆ. ಈವೆರಡನ್ನು ವಶಕ್ಕೆ ಪಡೆಯಲಾಗಿದೆ. ಅಬಕಾರಿ ನಿರೀಕ್ಷಕಿ ಜಿ.ಸಿ.ವನಿತಾ ಮಾತನಾಡಿ, ಯಲಿಯೂರು ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ನಗರದ ಜಿಲ್ಲಾ ಭೂ ದಾಖಲೆ ನೌಕರರ ಸಂಘದ ಆವರಣದಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆಯಲಾಗಿದೆ ಎಂಬ ಖಚಿತ ಮಾಹಿತಿ ದೊರೆಯಿತು. ನಂತರ ನ್ಯಾಯಾಲಯದಿಂದ ವಾರೆಂಟ್ ಪಡೆದು ಸರ್ಕಾರಿ ಅಥವಾ ಖಾಸಗಿ ಆಸ್ತಿಯೋ ಎಂಬ ಬಗ್ಗೆ ಮಾಹಿತಿ ಇಲ್ಲದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಕಂದಾಯ ಇಲಾಖೆ ಸಿಬ್ಬಂದಿ ಜತೆ ಕಾರ್ಯಾಚರಣೆ ನಡೆಸಿದಾಗ ಎರಡು ಗಾಂಜಾ ಗಿಡ ಬೆಳೆದಿರುವುದು ಪತ್ತೆಯಾಗಿದೆ. ಈ ಬಗ್ಗೆ ತನಿಖೆ ಮುಂದುವರೆದಿದ್ದು, ಆರೋಪಿಗಳ ಪತ್ತೆ ಕಾರ್ಯ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಅಬಕಾರಿ ಇಲಾಖೆ ಮಂಡ್ಯ ವಲಯ ಉಪ ನಿರೀಕ್ಷಕ ಕೆ.ರವಿಕುಮಾರ್, ಸಿಬ್ಬಂದಿ ಹರೀಶ್, ಸುರೇಶ್, ಯಶವಂತ್, ಅನಿಲ್ಕುಮಾರ್, ಕಂದಾಯ ಇಲಾಖೆಯ ತೇಜಸ್, ಅಪ್ಸರ್ ಪಾಷ ಇದ್ದರು.

Share This Article

ಈ ಕಾಯಿಲೆಯಿಂದ ಬಳಲುತ್ತಿರುವವರು ಸಿಹಿ ಗೆಣಸಿನಿಂದ ದೂರವಿರಿ; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಸಿಹಿ ಗೆಣಸು ಯಾರಿಗೆ ಇಷ್ಟವಿರುವುದಿಲ್ಲ ಹೇಳಿ. ರುಚಿಕರವಾದ ಸಿಹಿಗೆಣಸನ್ನು ಶೀತ ಋತುವಿನಲ್ಲಿ ಕಂಡುಬರುವ ಬೇರು ತರಕಾರಿ…

ಗಿಡಗಳನ್ನು ಹಸಿರಾಗಿಡಲು ಕಡಲೆಕಾಯಿ ಸಿಪ್ಪೆ ಪ್ರಯೋಜನಕಾರಿ; ಇಲ್ಲಿದೆ ಬಳಸುವ ವಿಧಾನ | Tips

ಚಳಿಗಾಲದಲ್ಲಿ ಸಸ್ಯಗಳಿಗೆ ಹೆಚ್ಚಿನ ಕಾಳಜಿ ಬೇಕು. ಏಕೆಂದರೆ ತಂಪಾದ ಗಾಳಿ ಮತ್ತು ಇಬ್ಬನಿಯಿಂದ ತೇವಾಂಶವು ಹೆಚ್ಚಾಗುವುದರಿಂದ…

Kurukshetra | ಕುರುಕ್ಷೇತ್ರ ಯುದ್ಧದ ಕೊನೆಯಲ್ಲಿ ರಣಭೂಮಿಗೆ ದ್ರೌಪದಿಯನ್ನು ಶ್ರೀಕೃಷ್ಣ ಕರೆತಂದಿದ್ದೇಕೆ; ಪರಮಾತ್ಮ ಹೇಳಿದ್ದೇನು?

ಕುರುಕ್ಷೇತ್ರ(Kurukshetra) ಯುದ್ಧದಲ್ಲಿ ಎಲ್ಲಾರೂ ಮರಣ ಹೊಂದಲು ಕಾರಣ ಪಾಂಡವರಲ್ಲ ದ್ರೌಪದಿಯ ಕಣ್ಣೀರು. ಕುರುಕ್ಷೇತ್ರ ಯುದ್ಧ ಮುಗಿದ…