ಆಲಂತಾಯ ಶಾಲೆ ಕಟ್ಟಡಕ್ಕೆ ಶಿಲಾನ್ಯಾಸ

Kdb_alanthaya
Published on

ಕಡಬ: ಕಡಬ ತಾಲೂಕು ಆಲಂತಾಯ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಆರ್‌ಪಿಎಲ್ 30 ಲಕ್ಷ ಅನುದಾನದಲ್ಲಿ ನಿರ್ಮಾಣವಾಗಲಿರುವ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು.

ಅರ್ಚಕ ಸಂತೋಷ್ ತಂತ್ರಿ ವರ್ಕಾಡಿ, ಪ್ರಜ್ವಲ್ ಬನ್ನಿಂತಾಯ ಪೂಜಾ ವಿಧಿವಿಧಾನ ನೆರವೇರಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಅಶೋಕ ಸಿ.ಬಿ. ಶಿಲಾನ್ಯಾಸ ನೆರವೇರಿಸಿದರು. ಮುಖ್ಯಶಿಕ್ಷಕಿ ಲವ್ಲಿ ಜೋಸ್, ನಿವೃತ್ತ ಶಿಕ್ಷಕರಾದ ಸಂಜೀವ ಪೂಜಾರಿ, ಸುಗಂಧಿ, ರಾಜೇಶ್ವರಿ, ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಅಜಿತ್‌ಕುಮಾರ್ ಪಾಲೇರಿ, ಕಾರ್ಯದರ್ಶಿ ಶಿವಪ್ರಸಾದ್, ಜತೆಕಾರ್ಯದರ್ಶಿ ಬಾಲಕೃಷ್ಣ ಅಲಂಗಪೆ, ಬಾಬು ನಾಯ್ಕ ಅಲಂಗಪೆ, ಉದಯಕುಮಾರ್ ಭಟ್ಲಡ್ಕ, ಪ್ರಶಾಂತ್ ರೈ ಅರಂತಬೈಲು, ಅಚ್ಚುತ ನಾಯ್ಕ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಂದರ ಪಾಲೇರಿ, ಗೋಳಿತ್ತೊಟ್ಟು ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಪ್ರಸಾದ್ ಕೆ.ಪಿ., ಮಾಜಿ ಸದಸ್ಯ ನೀಲಪ್ಪ ನಾಯ್ಕ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷರಾದ ಪದ್ಮನಾಭ ಪೂಜಾರಿ, ಪುರುಷೋತ್ತಮ ಆಚಾರ್ಯ, ಊರಿನ ಪ್ರಮುಖರಾದ ಸವಿತಾ ಪುಲಾರ, ಮನೋಹರ ಜೈನ್, ಕಟ್ಟಡದ ಗುತ್ತಿಗೆದಾರ ಮನೋಹರ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net