ನೀರಿನ ಸಮಸ್ಯೆ ನಿವಾರಣೆಗೆ ಹೆಚ್ಚಿನ ಆದ್ಯತೆ : ಶಾಸಕ ಉಮಾನಾಥ ಕೋಟ್ಯಾನ್ ಭರವಸೆ

New Project (21)
Published on

ವಿಜಯವಾಣಿ ಸುದ್ದಿಜಾಲ ಕಿನ್ನಿಗೋಳಿ ಗ್ರಾಮೀಣ ಪ್ರದೇಶದ ಮೂಲಸೌಕರ್ಯಗಳಲ್ಲಿ ಒಂದಾದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಮೂಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಚೇಳಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಲ್ಯ ಎಂಬಲ್ಲಿ ಎಂ.ಆರ್.ಪಿ.ಎಲ್. ಸಂಸ್ಥೆ ವತಿಯಿಂದ ಸುವಾರು 55 ಲಕ್ಷ ರೂ. ವೆಚ್ಚದಲ್ಲಿ ತೆರೆದಬಾವಿ ರಚನೆಗೆ ಅನುದಾನ ಬಿಡುಗಡೆಯಾಗಿದ್ದು, ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಚೇಳಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಾನಂದ, ಉಪಾಧ್ಯಕ್ಷೆ ರೇಖಾ, ವಾಜಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿತ್ಯಾನಂದ, ಸದಸ್ಯರಾದ ಯಶೋದಾ ಬಿ., ಸುಕುವಾರಿ, ಸುಧಾಕರ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಎಂ.ಆರ್.ಪಿ.ಎಲ್. ಸಂಸ್ಥೆಯ ಸಿ.ಇ.ಆರ್. ವಿಭಾಗದ ಜನರಲ್ ಮ್ಯಾನೇಜರ್ ಶ್ರೀನಿವಾಸ್, ಇಂಜಿನಿಯರ್ ಪವಿತ್ರಾ, ಶಿವಕುವಾರ್, ಎಂ.ಆರ್.ಪಿ.ಎಲ್. ನಿರ್ವಸಿತರ ಚೇಳಾರು ಕಾಲನಿ ಸಮಿತಿ ಅಧ್ಯಕ್ಷ ವಸಂತ ಕುಲಾಲ್, ಜಿ ಅಧ್ಯಕ್ಷ ಗಂಗಾಧರ ಪೂಜಾರಿ, ಕಾರ್ಯದರ್ಶಿ ವಿಶ್ವನಾಥ, ಎಸ್.ಎಸ್.ಮೂಲ್ಯ, ದಯಾನಂದ ಸುವರ್ಣ, ರಮೇಶ್ ಪೂಜಾರಿ ಚೇಳಾರು ಮೊದಲಾದವರಿದ್ದರು. ಗ್ರಾಮ ಪಂಚಾಯಿತಿ ವತಿಯಿಂದ ಚೇಳಾರುವಿನಲ್ಲಿ ನದಿ ಬದಿ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಎಂ.ಆರ್.ಪಿ.ಎಲ್. ವತಿಯಿಂದ ಶುಧ್ಧ ನೀರಿನ ಟಕ ಸ್ಥಾಪಿಸುವಂತೆ ಮನವಿ ನೀಡಲಾಯಿತು.

ಎಂ.ಆರ್.ಪಿ.ಎಲ್ ತನ್ನ ಸಿ.ಎಸ್.ಆರ್. ವಿಭಾಗದ ಮೂಲಕ ತನ್ನ ಸಂಸ್ಥೆಯ ಸುತ್ತಲಿನ ಗ್ರಾಮ ಪಂಚಾಯಿತಿಗಳ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಮೀಸಲಿಟ್ಟು ಗ್ರಾಮಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ. ಮುಖ್ಯವಾಗಿ ಶಿಕ್ಷಣ, ಆರೋಗ್ಯ, ಕುಡಿಯುವ ನೀರಿಗೆ ತುಂಬಾ ಆದ್ಯತೆ ನೀಡುತ್ತಿರುವುದು ಶ್ಲಾಘನೀಯ. ಉಮಾನಾಥ ಕೋಟ್ಯಾನ್, ಮೂಲ್ಕಿ-ಮೂಡುಬಿದಿರೆ ಶಾಸಕ https://www.vijayavani.net/ram-navami-rath-yatra-to-moodbidri-tomorrow https://www.vijayavani.net/mla-kotyan-visits-sri-kshetra-italaka

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net